Publish Date: Sun, 16 Oct 2022 (17:23 IST)
Updated Date: Sun, 16 Oct 2022 (17:28 IST)
ಆರ್ಟಿಕಲ್ 370 ರದ್ದತಿ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಅಸಾಧ್ಯವೆಂದು ಹೇಳಲಾಗಿದೆ. ಆದರೆ ನರೇಂದ್ರ ಮೋದಿ ಸರ್ಕಾರ ಅದನ್ನು ಮಾಡಿ ತೋರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಅವರು ಮಾತನಾಡಿದರು, ಆರ್ಟಿಕಲ್ 370 ರದ್ದತಿ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಅಸಾಧ್ಯವೆಂದು ಹೇಳಲಾಗಿದೆ. ಆದರೆ ನರೇಂದ್ರ ಮೋದಿ ಸರ್ಕಾರ ಅದನ್ನು ಮಾಡಿ ತೋರಿಸಿದೆ. ಮೋದಿ ಸರ್ಕಾರವು 2019ರ ಆಗಸ್ಟ್ 5ರಂದು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿತು. 370ನೇ ವಿಧಿಯನ್ನು ರದ್ದುಗೊಳಿಸಲಾಗುವುದು ಎಂದು ನೀವು ಎಂದಾದರೂ ಭಾವಿಸಿದ್ದೀರಾ ಎಂದು ಕಾರ್ಯಕರ್ತರನ್ನು ಕೇಳಿದರು. 370ನೇ ವಿಧಿಯ ಬಗ್ಗೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪ್ರಶ್ನಿಸಿದರೆ ಅವರು ಮೌನವಹಿಸುತ್ತಾರೆ. ನಿಮ್ಮ ಕೈಯಲ್ಲಿ ಅಯೋಧ್ಯೆಯಲ್ಲೇ ರಾಮಮಂದಿರ ನಿರ್ಮಾಣ ಮಾಡಲು ಸಾಧ್ಯವಾ ಎಂದು ಪ್ರಶ್ನಿಸಿದರು. ಇದೀಗ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.