Select Your Language

Notifications

webdunia
webdunia
webdunia
webdunia

ಬಿಎಸ್‌ವೈ 84 ದಿನಗಳ ಯಾತ್ರೆಗೆ ಚಾಲನೆ ನೀಡಲಿರುವ ಅಮಿತ್ ಶಾ

ಬಿಜೆಪಿ
ಬೆಂಗಳೂರು , ಮಂಗಳವಾರ, 31 ಅಕ್ಟೋಬರ್ 2017 (19:24 IST)
ಮುಂದಿನ ವರ್ಷದ ಆರಂಭದಲ್ಲಿ ಕರ್ನಾಟಕದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ  ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ 84 ದಿನಗಳ ಯಾತ್ರೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಚಾಲನೆ ನೀಡಲಿದ್ದಾರೆ.
ಕೇಂದ್ರ ಸಚಿವರು, ರಾಜ್ಯದ ಬಿಜೆಪಿ ನಾಯಕರ ಉಪಸ್ಥಿತಿಯಲ್ಲಿ ನವೆಂಬರ್ 2 ರಂದು ಅಮಿತ್ ಶಾ ಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ರಾಜ್ಯದಲ್ಲಿ 224 ಕ್ಷೇತ್ರಗಳಲ್ಲಿ ಹಾದುಹೋಗುವ 7,500 ಕಿ.ಮೀ. ಯಾತ್ರೆ ಜನವರಿ 28 ರಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯವರ ಸಾರ್ವಜನಿಕ ಸಭೆಯಲ್ಲಿ ಕೊನೆಗೊಳ್ಳಲಿದೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಅಮಿತ್ ಶಾ ಈಗಾಗಲೇ ಘೋಷಿಸಿದ್ದಾರೆ.
 
ಲಿಂಗಾಯುತ ಪ್ರಭಾವಿ ನಾಯಕರಾದ ಯಡಿಯೂರಪ್ಪ 2008ರಲ್ಲಿ ಸ್ವಂತಬಲದ ಮೇಲೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು. ಆದರೆ, ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪತ್ತೆಯಾಗದ ಎಲ್ಲಾ ಪ್ರಕರಣಗಳು ಇಂಪಾರ್ಟೆಂಟ್: ಡಿಜಿಪಿ ನೀಲಮಣಿ ರಾಜು