Publish Date: Wed, 16 Aug 2017 (18:34 IST)
Updated Date: Wed, 16 Aug 2017 (18:37 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೇ ನೀವ್ಯಾರ್ರಿ ನಮಗೆ ಲೆಕ್ಕ ಕೇಳೋಕೆ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಅಮಿತ್ ಶಾ ಆರೋಪಗಳಿಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಜನತೆಗೆ ಲೆಕ್ಕ ಕೇಳಲು ಹಕ್ಕಿದೆ. ಶಾಸಕಾಂಗ ಸಭೆಯ ಸದಸ್ಯರಿಗೆ ಲೆಕ್ಕ ಕೇಳುವ ಹಕ್ಕಿದೆ. ಅವರಿಗೆ ಲೆಕ್ಕ ಕೊಡುತ್ತೇವೆ. ನೀವ್ಯಾರ್ರಿ ಲೆಕ್ಕ ಕೇಳೋಕೆ ಎಂದು ಕಿಡಿಕಾರಿದ್ದಾರೆ.
ಅಮಿತ್ ಶಾ ಗೃಹ ಸಚಿವರಾಗಿದ್ದಾಗ ಜೈಲಿಗೆ ಹೋದವರು. ಇಂದು ಭ್ರಷ್ಟಚಾರಾದ ಆರೋಪಗಳ ಮೇಲೆ ಜೈಲಿಗೆ ಹೋಗಿ ಬಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಕದಲ್ಲಿ ಕುರಿಸಿಕೊಂಡು ನಮ್ಮ ಸರಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಯಡಿಯೂರಪ್ಪ, ಕಟ್ಟಾ ಸುಬ್ರಹ್ಮಣ್ಯಂ ನಾಯ್ಡು, ಕೃಷ್ಣಯ್ಯ ಶೆಟ್ಟಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವುದು ಅಮಿತ್ ಶಾ ಮರೆತಂತಿದೆ ಎಂದು ಲೇವಡಿ ಮಾಡಿದರು.
ನಮ್ಮ ಸರಕಾರದ ಯಾರೊಬ್ಬ ಸಚಿವರು ಜೈಲಿಗೆ ಹೋಗಿ ಬಂದಿಲ್ಲ. ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿಲ್ಲ. ನಮ್ಮದು ನುಡಿದಂತೆ ನಡೆದ ಸರಕಾರ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.