ಅಮಿತ್ ಶಾ ಅವರೇ ನೀವ್ಯಾರ್ರಿ ಲೆಕ್ಕ ಕೇಳೋಕೆ: ಸಿಎಂ ವಾಗ್ದಾಳಿ

Webdunia
ಬುಧವಾರ, 16 ಆಗಸ್ಟ್ 2017 (18:34 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೇ ನೀವ್ಯಾರ್ರಿ ನಮಗೆ ಲೆಕ್ಕ ಕೇಳೋಕೆ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಅಮಿತ್ ಶಾ ಆರೋಪಗಳಿಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಜನತೆಗೆ ಲೆಕ್ಕ ಕೇಳಲು ಹಕ್ಕಿದೆ. ಶಾಸಕಾಂಗ ಸಭೆಯ ಸದಸ್ಯರಿಗೆ ಲೆಕ್ಕ ಕೇಳುವ ಹಕ್ಕಿದೆ. ಅವರಿಗೆ ಲೆಕ್ಕ ಕೊಡುತ್ತೇವೆ. ನೀವ್ಯಾರ್ರಿ ಲೆಕ್ಕ ಕೇಳೋಕೆ ಎಂದು ಕಿಡಿಕಾರಿದ್ದಾರೆ. 
 
ಅಮಿತ್ ಶಾ ಗೃಹ ಸಚಿವರಾಗಿದ್ದಾಗ ಜೈಲಿಗೆ ಹೋದವರು. ಇಂದು ಭ್ರಷ್ಟಚಾರಾದ ಆರೋಪಗಳ ಮೇಲೆ  ಜೈಲಿಗೆ ಹೋಗಿ ಬಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಕದಲ್ಲಿ ಕುರಿಸಿಕೊಂಡು ನಮ್ಮ ಸರಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಯಡಿಯೂರಪ್ಪ, ಕಟ್ಟಾ ಸುಬ್ರಹ್ಮಣ್ಯಂ ನಾಯ್ಡು, ಕೃಷ್ಣಯ್ಯ ಶೆಟ್ಟಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವುದು ಅಮಿತ್ ಶಾ ಮರೆತಂತಿದೆ ಎಂದು ಲೇವಡಿ ಮಾಡಿದರು.  
 
ನಮ್ಮ ಸರಕಾರದ ಯಾರೊಬ್ಬ ಸಚಿವರು ಜೈಲಿಗೆ ಹೋಗಿ ಬಂದಿಲ್ಲ. ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿಲ್ಲ. ನಮ್ಮದು ನುಡಿದಂತೆ ನಡೆದ ಸರಕಾರ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments