Publish Date: Wed, 10 Jul 2019 (14:17 IST)
Updated Date: Wed, 10 Jul 2019 (14:19 IST)
ಮೈತ್ರಿ ಪಕ್ಷಗಳ ಶಾಸಕರನ್ನು ಬಿಜೆಪಿ ಕುದುರೆ ವ್ಯಾಪಾರ ನಡೆಸುತ್ತಿದೆ ಎಂದು ಆರೋಪಿಸಿ ಕೈ ಪಾಳೆಯದ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಪ್ರತಿಭಟನೆಗೆ ಮುಂದಾಗಿದ್ದಾರೆ.
ಬಿಜೆಪಿ ಆಪರೇಷನ್ ಕಮಲ ಮೂಲಕ ಶಾಸಕರ ಖರೀದಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು. ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಕೈ ಪಡೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಧರಣಿ ನಿರತರು ಕಿಡಿಕಾರಿ ಧಿಕ್ಕಾರ ಕೂಗಿದರು.
ಪ್ರಜಾಪ್ರಭುತ್ವ ಕಗ್ಗೊಲೆ ಮಾಡುತ್ತಿರುವ ಬಿಜೆಪಿಗೆ ಧಿಕ್ಕಾರ ಎಂದು ಘೋಷಣೆಯನ್ನು ಕಾಂಗ್ರೆಸ್ ಮುಖಂಡರು ಕೂಗಿದ್ರು.