Publish Date: Tue, 09 Jan 2018 (07:54 IST)
Updated Date: Tue, 09 Jan 2018 (07:58 IST)
ಬೆಂಗಳೂರು : ವಿಧಾನ ಸಭೆ ಚುನಾವಣೆಗಳ ಸಿದ್ಧತೆ ಬಗ್ಗೆ ಚರ್ಚಿಸಲು ಬಿಜೆಪಿಯ ರಾಷ್ಟ್ರಾಧ್ಯಕ ಅಮಿತ್ ಶಾ ಅವರು ಮಂಗಳವಾರ (ಇಂದು) ಬೆಂಗಳೂರಿಗೆ ಆಗಮಿಸಲಿದ್ದಾರೆ.
ಸಂಜೆ 4 ಗಂಟೆಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದು ನೆಲಮಂಗಲ ಬಳಿಯ ಖಾಸಗಿ ಹೋಟೆಲ್ ಒಂದರಲ್ಲಿ ತಂಗಲಿದ್ದು, ನಂತರ ಉತ್ತರ ಕರ್ನಾಟಕ ಭಾಗದ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಹಾಗು ಜಿಲ್ಲಾ ಸಂಚಾಲಕರ ಸಭೆ ನಡೆಸಲಿದ್ದು, ರಾತ್ರಿ ದಕ್ಷಿಣ ಕರ್ನಾಟಕ ಭಾಗದ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಹಾಗು ಜಿಲ್ಲಾ ಸಂಚಾಲಕರ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಬಾರಿ ಸರಿಯಾಗಿ ಸಭೆಯನ್ನು ನಡೆಸಲು ಸಾಧ್ಯವಾಗದ ಕಾರಣ ಇಂದು ಸಭೆಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ