Webdunia - Bharat's app for daily news and videos

Install App

ಪಾಟ್ನಾದಲ್ಲಿ 20 ನಿಮಿಷ ಲಿಫ್ಟ್‌ನಲ್ಲಿಯೇ ಸಿಲುಕಿ ಒದ್ದಾಡಿದ ಅಮಿತ್ ಶಾ

Webdunia
ಶುಕ್ರವಾರ, 21 ಆಗಸ್ಟ್ 2015 (13:10 IST)
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯದ ವಿಧಾನಸಭಾ ಚುನಾವಣೆಯು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆಂದು ನಿನ್ನೆ ರಾಜ್ಯದ ಪಾಟ್ನಾ ನಗರಕ್ಕೆ ಆಗಮಿಸಿದ್ದ ವೇಳೆ ಸುಮಾರು 20 ನಿಮಿಷಗಳ ಕಾಲ ಇಲ್ಲಿನ ರಾಜಭವನದ ಬಳಿ ಇರುವ ಸರ್ಕಾರಿ ಅತಿಥಿ ಗೃಹದ ಲಿಫ್ಟ್‌ನಲ್ಲಿ ಸಿಲುಕಿ ಒದ್ದಾಡಿದ ಘಟನೆ ನಡೆದಿದೆ. 
 
ಹೌದು, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಪಕ್ಷ ಸಂಘಟನೆಗೆಂದು ಇಲ್ಲಿಗೆ ಆಗಮಿಸಿದ್ದ ಶಾ, ಲಿಫ್ಟ್‌ನಲ್ಲಿ ಸಂಚರಿಸುತ್ತಿದ್ದರು. ಆದರೆ ಈ ವೇಳೆ ತಾಂತ್ರಿಕ ದೋಷ ಎದುರಾದ ಹಿನ್ನೆಲೆಯಲ್ಲಿ ಅವರ ಆಪ್ತ ಕಾರ್ಯದರ್ಶಿ ಸೇರಿದಂತೆ ಪಕ್ಷದ ಇತರೆ ಮುಖಂಡರು ಸುಮಾರು 20 ನಿಮಿಷಗಳ ಕಾಲ ಲಿಫ್ಟ್‌ನಲ್ಲಿಯೇ ಸಿಲುಕಿ ಒದ್ದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. 
 
ಈ ಮಾಹಿತಿಯನ್ನು ತಿಳಿದ ಸಿಆರ್‌ಪಿಎಫ್ ಸಿಬ್ಬಂದಿ, ಕೂಡಲೇ ಸ್ಥಳಕ್ಕಾಗಮಿಸಿ ಲಿಫ್ಟ್‌ನ ಬಾಗಿಲನ್ನು ಕತ್ತರಿಸಿ ನಾಯಕರನ್ನು ರಕ್ಷಿಸುವಲ್ಲಿ ಸಫಲರಾದರು. ಆದರೆ ಹೊರ ಬಂದ ನಾಯಕರು ಸುಧಾರಿಸಿಕೊಳ್ಳಲು ಸುಮಾರು ಅರ್ಧ ಗಂಟೆಗೂ ಮೀರಿದ ಕಾಲಾವಕಾಶವನ್ನು ತೆಗೆದುಕೊಂಡರು ಎಂಬುದಾಗಿ ನಾಯಕರ ಆಪ್ತ ಮೂಲಗಳು ತಿಳಿಸಿವೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments