Publish Date: Sun, 01 Apr 2018 (05:36 IST)
Updated Date: Sun, 01 Apr 2018 (05:39 IST)
ಮೈಸೂರು: ಮೈಸೂರಿನಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸಿದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಳ್ಳಾರಿ ಗಣಿ ದಣಿ ಮತ್ತೆ ಬಿಜೆಪಿಯಲ್ಲಿ ಸಕ್ರಿಯರಾಗುವುದರ ಬಗ್ಗೆ ಖಡಕ್ ಸಂದೇಶ ಕೊಟ್ಟಿದ್ದಾರೆ.
ಜನಾರ್ಧನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಅವರು ಕಡ್ಡಿ ಮುರಿದಂತೆ ಹೇಳಿದ್ದಾರೆ. ಈ ಮೂಲಕ ಮತ್ತೆ ಪಕ್ಷದಲ್ಲಿ ಸಕ್ರಿಯರಾಗುವ ರೆಡ್ಡಿ ಆಸೆಗೆ ತಣ್ಣೀರೆರಚಿದ್ದಾರೆ.
ಈ ಚುನಾವಣೆಯಲ್ಲಿ ಮತ್ತೆ ಬಳ್ಳಾರಿ ರಾಜಕೀಯಕ್ಕೆ ಜನಾರ್ಧನ ರೆಡ್ಡಿ ಪುನರಾಗಮನವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಕಳೆದ ಚುನಾವಣೆಯಲ್ಲಿ ಇವರೇ ಈ ಭಾಗದಲ್ಲಿ ಬಿಜೆಪಿ ಗೆಲುವಿಗೆ ಕಾರಣರಾಗಿದ್ದರು. ಆದರೆ ಅಕ್ರಮ ಗಣಿಗಾರಿಕೆ ಧೂಳು ಮೆತ್ತಿಕೊಂಡಿರುವ ರೆಡ್ಡಿಗೆ ಮತ್ತೆ ಸ್ಥಾನ ಕೊಟ್ಟರೆ ಪಕ್ಷಕ್ಕೆ ಕಳಂಕ ತಟ್ಟಬಹುದು ಎಂಬ ಕಾರಣಕ್ಕೆ ಬಿಜೆಪಿ ಇದೀಗ ಇವರನ್ನು ದೂರವೇ ಇಟ್ಟಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ