Publish Date: Tue, 20 Feb 2018 (16:52 IST)
Updated Date: Tue, 20 Feb 2018 (16:54 IST)
ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ಮಲಪಾಡ್ ನಿಂದ ಹಲ್ಲೆಗೊಳಗಾದ ವಿದ್ವತ್ ಬಿಜೆಪಿ ಕಾರ್ಯಕರ್ತ ಎಂದು ಬಾಯ್ತಪ್ಪಿ ಹೇಳಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇದೀಗ ತಪ್ಪೊಪ್ಪಿಕೊಂಡಿದ್ದಾರೆ.
ಸಿದ್ದರಾಮಯ್ಯ ಸರ್ಕಾರದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಅದಕ್ಕೆ ಉದಾಹರಣೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಮ್ಮ ಕಾರ್ಯಕರ್ತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಅಮಿತ್ ಶಾ ಸುರತ್ಕಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದರು.
ಆದರೆ ವಿದ್ವತ್ ಬಿಜೆಪಿ ಕಾರ್ಯಕರ್ತನಲ್ಲ ಎಂಬ ವಿಚಾರ ಅರಿವಿಗೆ ಬರುತ್ತಿದ್ದಂತೆ ತಮ್ಮ ತಪ್ಪು ಹೇಳಿಕೆಯನ್ನು ಒಪ್ಪಿಕೊಂಡಿದ್ದಾರೆ. ವಿದ್ವತ್ ಬಿಜೆಪಿ ಕಾರ್ಯಕರ್ತನಲ್ಲ. ಆದರೆ ನಾನು ತಪ್ಪು ಹೇಳಿದ್ದಕ್ಕಾದರೂ ಈ ವಿಚಾರ ಚರ್ಚೆಗೆ ಬಂತು ಎಂದು ಅಮಿತ್ ಶಾ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ