Publish Date: Fri, 27 Apr 2018 (09:27 IST)
Updated Date: Fri, 27 Apr 2018 (09:28 IST)
ಬೆಂಗಳೂರು: ರಾಜ್ಯ ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರಿನ ಚಾಲುಕ್ಯ ವೃತ್ತದಲ್ಲಿರುವ ತಮ್ಮ ನಿವಾಸದಲ್ಲಿ ಬೀಡು ಬಿಟ್ಟಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಿಜೆಪಿ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ರಾತ್ರೋ ರಾತ್ರಿ ಬಿಜೆಪಿ ನಾಯಕರಾದ ಅನಂತ ಕುಮಾರ್, ಬಿಎಲ್ ಸಂತೋಷ್, ಪ್ರಕಾಶ್ ಜಾವೇಡ್ಕರ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಅಮಿತ್ ಶಾ ವರುಣಾ ವಿಚಾರದಲ್ಲಿ ಉಂಟಾಗಿರುವ ಅಸಮಾಧಾನ ಶಮನಕ್ಕೆ ಸೂಚಿಸಿದ್ದಾರೆ ಮತ್ತು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗದ ರೀತಿಯಲ್ಲಿ ನಡೆದುಕೊಳ್ಳುವಂತೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಇಂದು ಕೊಪ್ಪಳದಲ್ಲಿ ರೋಡ್ ಶೋ, ಸಮಾವೇಶ ನಡೆಸಲಿರುವ ಅಮಿತ್ ಶಾ, ಬೆಳಿಗ್ಗೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಜತೆ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.