Publish Date: Sat, 31 Mar 2018 (09:26 IST)
Updated Date: Sat, 31 Mar 2018 (09:28 IST)
ಮೈಸೂರು: ಮೈಸೂರಿನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಹಳೇ ಮೈಸೂರು ಭಾಗದಲ್ಲಿ ಸುತ್ತಾಟ ನಡೆಸಲಿದ್ದಾರೆ. ಮೇಲುಕೋಟೆ, ಶ್ರೀರಂಗಪಟ್ಟಣದಲ್ಲಿ ಇಂದು ಶಾ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ ಪತ್ರಿಕಾಗೋಷ್ಠಿ ನಡೆಸಲಿರುವ ಅಮಿತ್ ಶಾ ನಂತರ ಬಿಜೆಪಿ ಪ್ರಚಾರ ವಾಹನಗಳಿಗೆ ಚಾಲನೆ ನೀಡಲಿದ್ದಾರೆ. ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಅದಲ್ಲದೆ, ಆತ್ಮಹತ್ಯೆ ಮಾಡಿಕೊಂಡ ರೈತ ಚೆನ್ನೇನಹಳ್ಳಿ ರಾಜೇಂದ್ರ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಅದಾದ ಬಳಿಕ ವಿವಿಧ ಕಾರ್ಯಕ್ರಮಗಳಲ್ಲಿ ಶಾ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕರು ಶಾಗೆ ಜತೆಯಾಗಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ