Publish Date: Fri, 30 Mar 2018 (09:37 IST)
Updated Date: Fri, 30 Mar 2018 (09:40 IST)
ಮೈಸೂರು: ಮೈಸೂರು ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ವಿಶ್ವಪ್ರಸಿದ್ಧ ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ರಾಜ ಯದುವೀರ್ ಒಡೆಯರ್, ರಾಜಮಾತೆ ಪ್ರಮೋದ ದೇವಿ ಅವರನ್ನು ಭೇಟಿಯಾಗಲಿದ್ದಾರೆ.
ಯದುವೀರ್ ರನ್ನು ಬಿಜೆಪಿಗೆ ಸೆಳೆಯಲು ಪ್ರಯತ್ನ ನಡೆದಿದೆ ಎಂಬ ಸುದ್ದಿ ಬಂದಿತ್ತು. ಇದರ ಬೆನ್ನಲ್ಲೇ ಯದುವೀರ್ ತಾವು ಯಾವುದೇ ರಾಜಕೀಯ ಪಕ್ಷ ಸೇರಲು ಇಷ್ಟಪಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು.
ಇದೆಲ್ಲದರ ನಡುವೆ ಇಂದು ಅಮಿತ್ ಶಾ ಅರಮನೆಗೆ ಭೇಟಿ ನೀಡಲಿದ್ದು, ರಾಜವಂಶಸ್ಥರೊಂದಿಗೆ ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಅಮಿತ್ ಶಾಗೆ ಕೆಲವು ನಾಯಕರೂ ಜತೆಯಾಗಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ