Publish Date: Tue, 01 May 2018 (09:19 IST)
Updated Date: Tue, 01 May 2018 (09:20 IST)
ಬೆಂಗಳೂರು: ಅತ್ತ ಪ್ರಧಾನಿ ಮೋದಿ ಇಂದಿನಿಂದ ಐದು ದಿನಗಳ ಕಾಲ ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದರೆ, ಇತ್ತ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿವಿಧ ಮಠಗಳಿಗೆ ಭೇಟಿ ನೀಡಲಿದ್ದಾರೆ.
ಇಂದು ಶೃಂಗೇರಿ ಶಾರದಾಂಬೆ ಮಠ ಮತ್ತು ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಅಮಿತ್ ಶಾ ಭೇಟಿ ನೀಡಿ ಸ್ವಾಮೀಜಿಗಳ ಜತೆ ಮಾತುಕತೆ ನಡೆಸಲಿದ್ದಾರೆ.
ಬೆಳಿಗ್ಗೆ 9.45 ಕ್ಕೆ ಹೆಲಿಕಾಪ್ಟರ್ ಮಾರ್ಗವಾಗಿ ಅಮಿತ್ ಶಾ ಶೃಂಗೇರಿಗೆ ಆಗಮಿಸಲಿದ್ದಾರೆ. ಬಳಿಕ ಬಾಳೆಹೊನ್ನೂರಿಗೆ ಭೇಟಿ ಕೊಡಲಿದ್ದಾರೆ. ಬಳಿಕ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.