Publish Date: Fri, 30 Mar 2018 (13:07 IST)
Updated Date: Fri, 30 Mar 2018 (13:16 IST)
ಮೈಸೂರು: ಚುನಾವಣಾ ಪ್ರಚಾರಕ್ಕಾಗಿ ಮೈಸೂರಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರ್ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಎಸ್ ಎಸ್ ಕಾರ್ಯಕರ್ತ ಕ್ಯಾತಮಾರನಹಳ್ಳಿ ರಾಜು ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ.
ರಾಜು ಮನೆಯಲ್ಲಿ ಅಮಿತ್ ಶಾ ಮತ್ತು ತಂಡಕ್ಕೆ ಕುಳಿತುಕೊಳ್ಳಲು ಕುರ್ಚಿ ವ್ಯವಸ್ಥೆ ಮಾಡಿದರೂ ನೆಲದ ಮೇಲೆಯೇ ಕುಳಿತು ಕಷ್ಟ ವಿಚಾರಿಸಿಕೊಂಡರು. ಈ ವೇಳೆ ಕುಳಿತುಕೊಳ್ಳಲು ಸ್ಥಳವಿಲ್ಲದೇ ಇದ್ದುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನಿಂತೇ ಇದ್ದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ ಸಿದ್ದರಾಮಯ್ಯ ಸರ್ಕಾರದ ಅವಧಿ ಮುಗಿಯುತ್ತಾ ಬಂದಿದೆ. ಮುಂದೆ ಬಿಜೆಪಿ ಸರ್ಕಾರ ಬಂದಾಗ ಹತ್ಯೆಗೆ ಕಾರಣರಾದವರೆಲ್ಲರನ್ನೂ ಬಂಧಿಸಲಾಗುತ್ತದೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ