Publish Date: Sun, 18 Mar 2018 (09:04 IST)
Updated Date: Sun, 18 Mar 2018 (09:06 IST)
ಮೈಸೂರು: ಸಿಎಂ ಸಿದ್ದರಾಮಯ್ಯಗೆ ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ತವರಿನಲ್ಲೇ ಸೋಲುಣಿಸಿ ಮರ್ಮಾಘಾತ ನೀಡಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿದೆ.
ಇದಕ್ಕಾಗಿ ಸ್ವತಃ ಅಮಿತ್ ಶಾ ಯೋಜನೆ ರೂಪಿಸಿದ್ದಾರೆ. ಇದಕ್ಕಾಗಿ ಉತ್ತರ ಪ್ರದೇಶದ ಸಂಸದ ರಾಜೇಂದ್ರ ಅವರನ್ನು ಮೈಸೂರಿಗೆ ಕಳುಹಿಸಿದ್ದಾರೆ. ಸಂಸದ ರಾಜೇಂದ್ರ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರಕ್ಕೆ ವಿಶೇಷವಾಗಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ಇಲ್ಲಿ ನಮ್ಮ ಪಕ್ಷದ ಪರಿಸ್ಥಿತಿ ಸೂಕ್ಷ್ಮವಾಗಿದೆ ಎಂದು ನಮಗೆ ಗೊತ್ತು. ಹಾಗಿದ್ದರೂ ಪರಿಸ್ಥಿತಿ ಸುಧಾರಿಸುವ ವಿಶ್ವಾಸ ನಮ್ಮದು ಎಂದು ರಾಜೇಂದ್ರ ಹೇಳಿಕೊಂಡಿದ್ದಾರೆ. ಅಂದರೆ ಸಿಎಂ ತವರಿನ ಮೇಲೆ ಬಿಜೆಪಿ ಹೆಚ್ಚಿನ ಗಮನ ಕೇಂದ್ರೀಕರಿಸಿದೆ ಎಂದಾಯಿತು. ಈ ಮೂಲಕ ಭದ್ರಕೋಟೆಯಲ್ಲೇ ಕಾಂಗ್ರೆಸ್ ಗೆ ಪೆಟ್ಟುಕೊಡುವ ಲೆಕ್ಕಾಚಾರ ಹಾಕಿದೆ. ಆದರೆ ಇದು ಅಷ್ಟು ಸುಲಭವಲ್ಲ!
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ