Webdunia - Bharat's app for daily news and videos

Install App

ಅಮೃತ ಯೋಜನೆ: ಜಿಲ್ಲೆಗಳಲ್ಲಿ ಕಾಮಗಾರಿಗೆ ಅಸ್ತು

Webdunia
ಶನಿವಾರ, 4 ಜೂನ್ 2022 (14:44 IST)
ಬೆಂಗಳೂರು : ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಡಿ ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ತುಮಕೂರು ಸೇರಿದಂತೆ ಒಂಬತ್ತು ಜಿಲ್ಲೆಗಳ 503.25 ಕೋಟಿ ರು.

ಮೊತ್ತದ ಕಾಮಗಾರಿಗಳಿಗೆ ಪೌರಾಡಳಿತ ಇಲಾಖೆ ಶುಕ್ರವಾರ ಅನುಮೋದನೆ ನೀಡಿದೆ. ತನ್ಮೂಲಕ ಈ ಯೋಜನೆಯಡಿ ಇದುವರೆಗೆ ರಾಜ್ಯದ 291 ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 2993 ಕೋಟಿ ರು.ಗಳ ಕಾಮಗಾರಿಗಳಿಗೆ ಅನುಮೋದನೆ ದೊರೆತಂತಾಗಿದೆ.

ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯ 3885 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಕಳೆದ ಜನವರಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರಕಿತ್ತು.

ಅದಕ್ಕೆ ಪೂರಕವಾಗಿ ಅನುಮೋದನೆಗಾಗಿ ಜಿಲ್ಲಾಧಿಕಾರಿಗಳ ಮೂಲಕ ಕ್ರಿಯಾ ಯೋಜನೆಗಳು ಸಲ್ಲಿಕೆಯಾಗಿದ್ದವು. ಅವುಗಳಿಗೆ ಪೌರಾಡಳಿತ ಇಲಾಖೆಯು ಹಂತ ಹಂತವಾಗಿ ಈ ಯೋಜನೆಗಳ ಕಾಮಗಾರಿಗಳಿಗೆ ಕ್ರಿಯಾಯೋಜನೆ ನೀಡುತ್ತಾ ಬರುತ್ತಿದೆ.

ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ.ನಾಗರಾಜು ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಗಳ ರಾಜ್ಯ ಮಟ್ಟದ ಸಮಿತಿ ಸಭೆ ನಡೆಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ವಾಲ್ಮೀಕಿ ನಿಗಮಕ್ಕೆ ಆ 185 ಕೋಟಿ ರೂ ಬರೋವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments