Select Your Language

Notifications

webdunia
webdunia
webdunia
Saturday, 5 April 2025
webdunia

ತಾಂತ್ರೀಕ ದೋಷದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತಿರುಚಿರಾಪಳ್ಳಿಯಲ್ಲಿ ಭೂಸ್ಪರ್ಶ

Air India Flight

Sampriya

ತಿರುಚಿರಾಪಳ್ಳಿ , ಶನಿವಾರ, 18 ಮೇ 2024 (20:14 IST)
Photo Courtesy X
ತಿರುಚಿರಾಪಳ್ಳಿ: ತಾಂತ್ರೀಕ ದೋಷ ಕಾಣಿಸಿಕೊಂಡಿದ್ದರಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ತಿರುಚಿರಾಪಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.

137 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಪೈಲೆಟ್ ವಿಮಾನವನ್ನು ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ.

ಬೆಂಗಳೂರಿನತ್ತ ಹೊರಟಿದ್ದ ಏರ್‌ ಇಂಡಿಯಾ ವಿಮಾನದ ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ವಿಮಾನವು ಶುಕ್ರವಾರ ಸಂಜೆ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಿ ತುರ್ತು ಭೂಸ್ಪರ್ಶ ಮಾಡಿತ್ತು.

ಈ ವಿಮಾನದಲ್ಲಿ 137 ಮಂದಿ ಪ್ರಯಾಣಿಕರಿದ್ದರು. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ವಿಮಾನಯಾನ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಹೆಚ್ಚಳ: ಡಿಜಿಪಿಗೆ ದೂರು ನೀಡಿದ ಬಿಜೆಪಿ