ಮೇಕೆದಾಟು ಚರ್ಚೆ ನಡೆಸಲು ಸರ್ವಪಕ್ಷ ಸಭೆ: ಬೊಮ್ಮಾಯಿ

Webdunia
ಬುಧವಾರ, 9 ಮಾರ್ಚ್ 2022 (09:17 IST)
ಬೆಂಗಳೂರು : ಮೇಕೆದಾಟು ಯೋಜನೆ ಸಂಬಂಧ ಚರ್ಚೆ ನಡೆಸಲು ಇದೇ ವಾರ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ವಿಧಾನಸಭೆಯಲ್ಲಿ ಮಾತಾಡಿದ ಸಿಎಂ, ಮೇಕೆದಾಟು ಯೋಜನೆಯ ಡಿಪಿಆರ್, ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದಿದೆ. ಜೊತೆಗೆ ಕೇಂದ್ರದ ಪರಿಸರ ಇಲಾಖೆಯ ಅನುಮತಿ ಬೇಕಾಗಿದೆ.

ಇದರ ಮಧ್ಯೆ ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಈ ಬಗ್ಗೆ ಚರ್ಚಿಸಲು ಈ ವಾರದಲ್ಲೇ ಸರ್ವ ಪಕ್ಷ ಸಭೆ ಕರೆಯುತ್ತೇನೆ ಎಂದು ಸಿಎಂ ತಿಳಿಸಿದರು. 

ನಮಗೂ ಆದಷ್ಟು ಬೇಗ ಮೇಕೆದಾಟು ಯೋಜನೆ ಆರಂಭ ಆಗಬೇಕು ಅನ್ನೋದಿದೆ. ಎಲ್ಲರ ಸಲಹೆ ಪಡೆದು ಮುಂದುವರೆಯುತ್ತೇವೆ ಎಂದು ಸಭೆಗೆ ಸಿಎಂ ಭರವಸೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತಮಿಳುನಾಡಿನವರು ರಾಜಕೀಯಕ್ಕಾಗಿ ಕೋರ್ಟ್ಗೆ ಹೋಗಿದ್ದಾರೆ.

ಅದರ ಬಗ್ಗೆ ಸುಪ್ರೀಂ ಕೋರ್ಟ್ ಯಾವ ಆದೇಶವನ್ನೂ ಕೊಟ್ಟಿಲ್ಲ. ಕೇಂದ್ರ ಸರ್ಕಾರವೇ ಮೇಕೆದಾಟು ಕೋರ್ಟ್ನಲ್ಲಿದೆ ಎನ್ನುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದರು. ಅವತ್ತು ಶೇಖಾವತ್ ಇದನ್ನು ಹೇಳಿದ್ದು ಸುದ್ದಿಗೋಷ್ಠಿಯಲ್ಲಿ. ನನ್ನ ಸಮ್ಮುಖದಲ್ಲಿ ಅಲ್ಲ ಅಂತಾ ಸಿಎಂ ಸಮಜಾಯಿಷಿ ನೀಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಮುಂದಿನ ಸುದ್ದಿ
Show comments