Publish Date: Sat, 27 Nov 2021 (12:27 IST)
Updated Date: Sat, 27 Nov 2021 (12:29 IST)
ಯಾದಗಿರಿ : ಭಿಕ್ಷುಕಿಯ ಮೇಲೆ ಅತ್ಯಾಚಾರ ಮಾಡಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.
ಯಾದಗಿರಿ ನಗರದ ಹಳೆ ಬಸ್ ನಿಲ್ದಾಣದಲ್ಲಿ ನವೆಂಬರ್ 23ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಮುಕ ಹನುಮಂತ್(40) ರಾತ್ರಿ ಭಿಕ್ಷುಕಿಗೆ ಕಂಠ ಪೂರ್ತಿ ಮದ್ಯ ಕುಡಿಸಿ ತಾನು ಕುಡಿದು ರೇಪ್ ಮಾಡಿದ್ದಾನೆ. ಭಿಕ್ಷುಕಿ ನಿರಾಕರಿಸಿದ್ದರೂ, ಆಕೆಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಮಾಡಿದ್ದಾನೆ.
ಹನುಮಂತ್ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರ ಗ್ರಾಮದ ನಿವಾಸಿಯಾಗಿದ್ದು, ಸ್ಥಳೀಯರು ಪ್ರಶ್ನಿಸಿದ್ದಾಗ ಭಿಕ್ಷುಕಿಯನ್ನು ನನ್ನ ಹೆಂಡ್ತಿ ಆಗಬೇಕೆಂದು ನಾಟಕ ಮಾಡಿದ್ದ. ಆದರೆ ಅನುಮಾನ ಬಂದ ಸ್ಥಳೀಯರು ಪೊಲೀಸರನ್ನ ಸ್ಥಳಕ್ಕೆ ಕರೆಸಿ ಕಾಮುಕನನ್ನು ಒಪ್ಪಿಸಿದ್ದಾರೆ.
ನವೆಂಬರ್ 24 ರಂದು ಘಟನೆ ನಡೆದಿದ್ದು, ಮಾರನೇ ದಿನ ಬೆಳಗ್ಗೆ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಬಳಿಕ ಕಾಮುಕನನ್ನ ಪೊಲೀಸರು ಬಂಧಿಸಿದ್ದಾರೆ.