ಅಧಿವೇಶನದಲ್ಲಿ ಮಕ್ಕಳ ಪೌಷ್ಟಿಕತೆಯ ಬಗ್ಗೆ ಉತ್ತರಿಸುತ್ತ ಸಚಿವ ಹಾಲಪ್ಪ ಆಚಾರ್”ತೀವ್ರ ಅಪೌಷ್ಟಿಕ ಮಕ್ಕಳಿಗೆ ಪ್ರತಿದಿನ 12 ರೂ ಮೌಲ್ಯದ ಪೂರಕ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಮೂರರಿಂದ ಆರು ವರ್ಷದ ಎಲ್ಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ನೀಡಲಾಗುತ್ತದೆ ಮೊಟ್ಟೆ ಬೇಡ ಎನ್ನುವ ಮಕ್ಕಳಿಗೆ ವಾರದಲ್ಲಿ ಮೂರು ದಿನ 200 ಮಿ.ಲಿ ಲೀಟರ್ ಹಾಲನ್ನು ನೀಡಲಾಗುತ್ತಿದೆ. ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ದೂರಮಾಡಲು ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.