Select Your Language

Notifications

webdunia
webdunia
webdunia
webdunia

ಸೌಜ್ಯನ್ಯ ತಾಯಿ ಕುಸುಮಾವತಿ ವಿರುದ್ಧ ದಾಖಲಾಯಿತು ಎಫ್‌ಐಆರ್‌, ಯಾವಾ ಪ್ರಕರಣ ಗೊತ್ತಾ

Dharmasthala Sowjanya Case

Sampriya

ಮಂಗಳೂರು , ಬುಧವಾರ, 29 ಅಕ್ಟೋಬರ್ 2025 (15:55 IST)
Photo Credit X
ಮಂಗಳೂರು: ಧರ್ಮಸ್ಥಳ ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ 12ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 

ಅ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಸಹೋದರ ಮೋಹನ್ ಶೆಟ್ಟಿ, ಪ್ರಸನ್ನ ರವಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿರುದ್ಧ ಪ್ರತಿಭಟನೆ ಅಂತಾ ಕರೆ ನೀಡಲಾಗಿತ್ತು. 

ಪೊಲೀಸರಿಂದ ಅನುಮತಿ ಸಿಗದೇ ಇದ್ದರೂ ಜನ ಸೇರುವಂತೆ ಕರೆ ಕೊಡಲಾಗಿತ್ತು. ಈ ಘಟನೆಯಿಂದ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುತ್ತಿದೆ ಎಂದು ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಅದರಂತೆ ಇದೀಗ ಹಲವರ ವಿರುದ್ಧ ಪ್ರಕರಣ ದಾಖಲು. 



Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಸಂಪುಟ ವಿಚಾರ: ಕೈ ನಾಯಕರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೊಟ್ಟ ಕಿವಿಮಾತು ಇಲ್ಲಿದೆ