Select Your Language

Notifications

webdunia
webdunia
webdunia
webdunia

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

ಶಿವಮೊಗ್ಗ ವೈರಲ್ ವಿಡಿಯೋ ವೈರಲ್

Sampriya

ಶಿವಮೊಗ್ , ಸೋಮವಾರ, 30 ಜೂನ್ 2025 (18:45 IST)
Photo Credit X
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದ ಕ್ಷುಲ್ಲಕ ಕಾರಣಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ.

ವೃದ್ಧೆಯನ್ನು ಆಕೆಯ ಮನೆಯಿಂದ ಹೊರಗೆ ಎಳೆದುಕೊಂಡು ಹೋಗಿ, ಕಂಬಕ್ಕೆ ಕಟ್ಟಿ ನೆರೆಹೊರೆಯವರು ಕ್ರೂರವಾಗಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಜೂನ್ 24 ರ ಬೆಳಗ್ಗೆ ಈ ಘಟನೆ ನಡೆದಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಘಟನೆಯ ಮರುದಿನ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ದೂರಿನ ಪ್ರಕಾರ, ಹುಚ್ಚಮ್ಮ ಎಂಬ ವೃದ್ಧೆ, ತಮ್ಮ ಮನೆಯ ಮುಂದೆ ಪ್ರೇಮ ಎಂಬ ಮಹಿಳೆ ಕಸ ತಂದು ಹಾಕಿದ್ದನ್ನು ಪ್ರಶ್ನಿಸಿದ್ದರು. ಈ ಸಣ್ಣ ವಿಷಯಕ್ಕೆ ಕೋಪಗೊಂಡ ಪ್ರೇಮ, ಜೊತೆಗೆ ಮಂಜುನಾಥ್ ಮತ್ತು ದರ್ಶನ್ ಎಂಬ ಇಬ್ಬರು ಯುವಕರು, ಹುಚ್ಚಮ್ಮನವರನ್ನು ನಿಂದಿಸಿ, ಮನೆಯಿಂದ ಎಳೆದುಕೊಂಡು ಹೋಗಿ ಮರಕ್ಕೆ ಹಗ್ಗದಿಂದ ಕಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು