Select Your Language

Notifications

webdunia
webdunia
webdunia
Sunday, 6 April 2025
webdunia

ಅನೈತಿಕ ಸಂಬಂಧಕ್ಕೆ ಅಡ್ಡಿ ಪಡಿಸಿದನೆಂದು ತಮ್ಮನನ್ನೇ ಕೊಂದ ಅಕ್ಕ!

Hubballi
ಹುಬ್ಬಳ್ಳಿ , ಬುಧವಾರ, 18 ಮೇ 2022 (13:15 IST)
ಹುಬ್ಬಳ್ಳಿ: ನೂಲ್ವಿ ಗ್ರಾಮದಲ್ಲಿ ನಡೆದ ಕೊಲೆಯ ರಹಸ್ಯವನ್ನು ಭೇದಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊನ್ನೆಯಷ್ಟೇ ನೂಲ್ವಿ ಗ್ರಾಮದ ಹೊರವಲಯದಲ್ಲಿ ನಡೆದ ಭೀಕರ ಕೊಲೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ತಮ್ಮನನ್ನೇ ಅಕ್ಕ ಕೊಲೆ ಮಾಡಿರುವುದು ಪೊಲೀಸ್ ತನಿಖೆ ಮೂಲಕ ಹೊರ ಬಂದಿದೆ.
 
ಕಳೆದ ಎರಡೂ ದಿನಗಳ ಹಿಂದೆ ಶಂಭುಲಿಂಗ ಕಮಡೊಳ್ಳಿ(35) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣ ದಾಖಲಿಸಿಕೊಂಡ 24 ಗಂಟೆಯಲ್ಲಿಯೆ ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
 
ಅನೈತಿಕ ಸಂಬಂಧಕ್ಕೆ ಸಹೋದರ ಅಡ್ಡಿಯಾಗಿದ್ದ ಎಂಬ ಕಾರಣಕ್ಕೆ ಸಹೋದರಿ ಬಸವ್ವ ನರಸಣ್ಣವರ ಹಾಗೂ ಆಕೆಯ ಪ್ರಿಯಕರ ಚನ್ನಪ್ಪ ಮರೆಪ್ಪಗೌರಡ ಸೇರಿಕೊಂಡು ಕೊಲೆ ಮಾಡಿ ಶವವನ್ನು ಎಸೆದು ಹೋಗಿದ್ದರು.
ಪೊಲೀಸರಿಗೆ ಸಂಶಯ ಬಾರದಿರಲ್ಲಿ ಎಂದು ಸಹೋದರಿ ಸಹೋದರನ ಶವದ ಎದುರು ಕುಳಿತು ಕಣ್ಣಿರು ಹಾಕಿ ನಾಟಕವಾಡಿದ್ದರು. ಪೊಲೀಸ್ ತನಿಖೆಯಲ್ಲಿ ಅನೈತಿಕ‌ ಸಂಬಂಧಕ್ಕೆ ಕೊಲೆ ಮಾಡಿರುವದನ್ನು ಆರೋಪಿಗಳು ಒಪ್ಪಿಕೊಂಡಿದ್ದು,ತನ್ನ ಕಾಮದಾಟಕ್ಕೆ ಒಡ ಹುಟ್ಟಿದ ತಮ್ಮನನ್ನೇ ಕೊಲೆ ಮಾಡಲು ಸಂಚು ರೂಪಿಸಿದ ಅಕ್ಕ ಬಸವ್ವ ಹಾಗೂ ಆಕೆಯ ಪ್ರಿಯಕರನನ್ನು ಇದೀಗ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ತರಗತಿವರೆಗೆ ರಜೆ ಘೋಷಣೆ