Select Your Language

Notifications

webdunia
webdunia
webdunia
webdunia

ಕರ್ತವ್ಯನಿರತ ಪೊಲೀಸ್ ಅಧಿಕಾರಿ ಅಪಘಾತದಿಂದ ಸಾವು

An on-duty police officer died in an accident
bangalore , ಮಂಗಳವಾರ, 28 ಫೆಬ್ರವರಿ 2023 (20:44 IST)
ಕರ್ತವ್ಯ ನಿರತ ವೇಳೆ ಸಂಭವಿಸಿದ ಅಪಘಾತದಲ್ಲಿ ತಲೆಗೆ ತೀವ್ರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟ್ರಾಫಿಕ್ ಎಸ್ಐಎ ನಾಗರಾಜ್ ಅವರ ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ತಿಳಿದುಬಂದಿದೆ. ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
 
ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯಲ್ಲಿ ಎಸ್ಐಐ ಆಗಿ ಕೆಲಸ ಮಾಡುತ್ತಿದ್ದ ನಾಗರಾಜ್ ಅವರು ಭಾನುವಾರ ಮಧ್ಯಾಹ್ನ ಸಂಜೆ 4 ಗಂಟೆ ವೇಳೆ ಚಾಲುಕ್ಯ ಸರ್ಕಲ್ ನಲ್ಲಿ ಕರ್ತವ್ಯ ವೇಳೆ ಅರಮನೆ ರಸ್ತೆಯ ಸಿಐಡಿ ಕಡೆಯಿಂದ ಚಾಲುಕ್ಯ ವೃತ್ತಕ್ಕೆ ವೇಗವಾಗಿ ಬಂದಿದ್ದ ಆಟೊ ಏಕಾಏಕಿ ನಾಗರಾಜ್ ಗೆ ಗುದ್ದಿದೆ. ಅಪಘಾತ ರಭಸಕ್ಕೆ ತಲೆಗೆ ಪೆಟ್ಟಾಗಿದ್ದ ನಾಗರಾಜ್ ನನ್ನ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ಹೆಚ್ಚಿನ ಮಟ್ಟದಲ್ಲಿ ಗಾಯಗೊಂಡಿದ್ದರಿಂದ ಮಿದುಳಿಗೆ ಹಾನಿಯಾಗಿದ್ದು ನಿಷ್ಕ್ರಿಯಗೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. 
ಅಪಘಾತ ಸಂಬಂಧ ಚಾಲಕ ಶಿವಕುಮಾರ್ ಆಟೋ ಸಹಿತ ಪರಾರಿಯಾಗಲು ಯತ್ನಿಸಿದ್ದ. ಆದರೆ, ಸ್ಥಳಕ್ಕೆ ಬಂದ ಪೊಲೀಸರು ಸಾರ್ವಜನಿಕರ ಸಹಾಯದಿಂದ ಹಿಂಬಾಲಿಸಿ ಆರೋಪಿಯನ್ನು ವಿಂಡ್ಸರ್ ಮ್ಯಾನರ್ ಹೋಟೆಲ್ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಅಪಘಾತಕ್ಕೆ ಚಾಲಕನ ಅತೀ ವೇಗದ ಚಾಲನೆ ಮತ್ತು ನಿರ್ಲಕ್ಷ್ಯ ಆರೋಪ ಪ್ರಕರಣ ದಾಖಲಿಸಿಕೊಂಡಿದ್ದರು‌.  ಸದ್ಯ ಕುಟುಂಬಸ್ಥರಲ್ಲಿ ದುಃಖ ಮಡುಗಟ್ಟಿದೆ‌. ಅಂಗಾಂಗ ದಾನ ಮಾಡಲು ಕುಟುಂಬಸ್ಥರಿಗೆ ವೈದ್ಯರು ಸಮಾಲೋಚನೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ರಾಜ್ಯಾದ್ಯಂತ ಸರ್ಕಾರಿ ನೌಕರರ ಪ್ರತಿಭಟನೆ