Daily Horoscope
✕

ಚಂದ್ರಯಾನದ ಬಗ್ಗೆ ಪ್ರಕಾಶಿಸದ ಟ್ವೀಟ್

Webdunia
ಸೋಮವಾರ, 21 ಆಗಸ್ಟ್ 2023 (16:50 IST)
ಇಡೀ ಜಗತ್ತೇ ಭಾರತದ ಕನಸು " ಚಂದ್ರಯಾನ-3'ಯ ಯಶಸ್ಸಿಗೆ ಕಾಯುತ್ತಿದೆ. ಇನ್ನೇನು ಎರಡು ದಿನಗಳಲ್ಲಿ ಆ ಕನಸು ಪೂರ್ಣಗೊಳ್ಳಲಿದೆ. ಆ.23 ರಂದು ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸುವ ಮೂಲಕ ಚಂದ್ರಯಾನ-3 ಯಶಸ್ವಿಗೊಳ್ಳಲಿದೆ. ವಿಜ್ಞಾನಿಗಳು ಹಾಗೂ ಇಸ್ರೋವಿನ ಈ ಕನಸಿನ ಚಂದ್ರಯಾನ-3 ಬಗ್ಗೆ ನಟ ಪ್ರಕಾಶ್ ರಾಜ್ ಮಾಡಿರುವ ಟ್ವೀಟ್​​ವೊಂದು ವಿವಾದಕ್ಕೀಡಾಗಿದೆ. ಚಂದ್ರಯಾನ-3 ಅನ್ನು ‘ಚಾಯಿವಾಲಾನಿಗೆ ಹೋಲಿಸಿದಂತೆ ಟ್ವೀಟ್​ವೊಂದನ್ನು ಪ್ರಕಾಶ್ ರಾಜ್ ಮಾಡಿದ್ದಾರೆ. ಕಾರ್ಟೂನ್ ರಚಿತ ಒಬ್ಬ ವ್ಯಕ್ತಿ ಚಹಾವನ್ನು ಮಗುಚುವ ಫೋಟೋವೊಂದನ್ನು ಹಾಕಿ "ತಾಜಾ ಸುದ್ದಿ ಚಂದ್ರಯಾನದಿಂದ ಈಗಷ್ಟೇ ಬಂದ ಮೊದಲ ದೃಶ್ಯ'ವೆಂದು ಬರೆದುಕೊಂಡಿದ್ದಾರೆ. ಈ ಟ್ವಿಟ್ ನ್ನು ಅನೇಕರು ಟೀಕಿಸಿದ್ದಾರೆ. ಭಾರತದ ಹೆಮ್ಮೆಯಾಗಿರುವ ಚಂದ್ರಯಾನ 3 ಬಗೆಗಿನ ಇಂತಹ ಟ್ವೀಟ್​​ಗೆ ನೆಟ್ಟಿಗರು ಗರಂ ಆಗಿದ್ದಾರೆ. ಇದನ್ನು ಯಶಸ್ವಿಗೊಳಿಸಲು ತಮ್ಮ ಜೀವಮಾನದ ವರ್ಷಗಳನ್ನು ಹಾಕಿರುವ ನಮ್ಮ ವಿಜ್ಞಾನಿಗಳನ್ನು ನೀವು ಅಪಹಾಸ್ಯ ಮಾಡುತ್ತಿದ್ದೀರಿ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments