Select Your Language

Notifications

webdunia
webdunia
webdunia
webdunia

ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ; ನಿರೀಕ್ಷಣಾ ಜಾಮೀನಿಗೆ ಮುಂದಾದ ಶಾಸಕ ಗಣೇಶ್

ಬೆಂಗಳೂರು
ಬೆಂಗಳೂರು , ಗುರುವಾರ, 24 ಜನವರಿ 2019 (10:56 IST)
ಬೆಂಗಳೂರು : ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿ ತಲೆ ಮರೆಸಿಕೊಂಡಿರುವ ಕಂಪ್ಲಿ ಶಾಸಕ ಗಣೇಶ್ ನಿರೀಕ್ಷಣಾ ಜಾಮೀನಿಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


ಈಗಲ್ ಟನ್ ರೆಸಾರ್ಟಿನಲ್ಲಿ ಕಂಪ್ಲಿ ಶಾಸಕ ಗಣೇಶ್ ಕುಡಿದು ಗಲಾಟೆ ನಡೆಸಿ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಪ್ರಕರಣ ಸಂಬಂಧ ರಾಮನಗರ ಜಿಲ್ಲೆಯ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‍ ಐಆರ್ ದಾಖಲಾಗಿತ್ತು, ಈ ಹಿನ್ನಲೆಯಲ್ಲಿ ಬಂಧನಭೀತಿಯಿಂದ ಶಾಸಕ ಗಣೇಶ್ ತಲೆಮರೆಸಿಕೊಂಡಿದ್ದಾರೆ. ಆದಕಾರಣ ಪೊಲೀಸ್ ಅವರಿಗಾಗಿ ವಿಶೇಷ ತಂಡಗಳನ್ನು ರಚಿಸಿಕೊಂಡು  ಹುಡುಕಾಟ ನಡೆಸುತ್ತಿವೆ.


ಈ ನಡುವೆ ಶಾಸಕ ಗಣೇಶ್ ತಮ್ಮ ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗೆ ಮುಂದಾಗಿದ್ದಾರೆ. ಇಂದು ರಾಮನಗರ ಜೆ.ಎಮ್‍.ಎಫ್‍ಸಿ. ನ್ಯಾಯಾಲಯದಲ್ಲಿ ಮಧ್ಯಾಹ್ನದ ವೇಳೆಗೆ ಶಾಸಕ ಗಣೇಶ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಂಪ್ಲಿ ಶಾಸಕ ಗಣೇಶ್ ನನ್ನು ಮತ್ತೆ ರೌಡಿ ಪಟ್ಟಿಗೆ ಸೇರಿಸಲಾಗುವುದು - ಗೃಹ ಸಚಿವ ಎಂ.ಬಿ.ಪಾಟೀಲ್