Publish Date: Mon, 12 Nov 2018 (09:42 IST)
Updated Date: Mon, 12 Nov 2018 (09:47 IST)
ಬೆಂಗಳೂರು: ಇಂದು ಮುಂಜಾನೆ ನಿಧನರಾದ ಕೇಂದ್ರ ಸಚಿವ ಅನಂತ ಕುಮಾರ್ ಅಂತಿಮ ಸಂಸ್ಕಾರ ಬೆಂಗಳೂರಿನಲ್ಲಿಯೇ ನಡೆಯಲಿದೆ.
ಇಂದು ಸಂಜೆಯವರೆಗೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಬಳಿಕ ನಾಳೆ ಚಾಮರಾಜ ಪೇಟೆಯ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.
ಇಂದು ಸಂಜೆ ಕೇಂದ್ರ ಸರ್ಕಾರದ ಪರವಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು, ಅನಂತ ಕುಮಾರ್ ಅಂತಿಮ ದರ್ಶನ ಪಡೆಯಲಿದ್ದಾರೆ. ಈಗಾಗಲೇ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಯ ರಾಜ್ಯ ನಾಯಕರು ಅನಂತ ಕುಮಾರ್ ನಿವಾಸಕ್ಕೆ ಆಗಮಿಸಿದ್ದು, ಅಂತಿಮ ಕ್ರಿಯೆಗಳ ರೂಪು ರೇಷೆಗಳ ಬಗ್ಗೆ ತೀರ್ಮಾನ ಕೈಗೊಳ‍್ಳಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.