Publish Date: Thu, 08 Aug 2024 (15:05 IST)
Updated Date: Thu, 08 Aug 2024 (15:08 IST)
ಬೆಂಗಳೂರು: ಆಂಧ್ರಪ್ರದೇಶದ ಡಿಸಿಎಂ, ನಟ ಪವನ್ ಕಲ್ಯಾಣ್ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ, ಮಾತುಕತೆ ನಡೆಸಿದರು.
ಅರಣ್ಯ ಇಲಾಖೆ ಸಭೆ ಹಿನ್ನೆಲೆ ಪವನ್ ಕಲ್ಯಾಣ್ ಅವರು ಬೆಂಗಳೂರಿಗೆ ಬಂದಿದ್ದಾರೆ. ಸಭೆಗೂ ಮುನ್ನಾ ಸಿಎಂ ಸಿದ್ದರಾಮಯ್ಯ ಅವರನ್ನು ಪವನ್ ಕಲ್ಯಾಣ್ ಭೇಟಿಯಾಗಿ ಕೆಲ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.
ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹಮದ್ ಅವರು ಕೂಡಾ ಇದ್ದರು.
ಮೊದಲ ಬಾರಿಗೆ ಶಾಸಕರಾದ ಪವನ್ ಕಲ್ಯಾಣ್ ಉಪ ಮುಖ್ಯಮಂತ್ರಿ ಹುದ್ದೆಯನ್ನು ಪಡೆದಿದ್ದಾರೆ. ಅಲ್ಲದೇ ಅವರು ಪಂಚಾಯತ್ ರಾಜ್. ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮೀಣ ನೀರು ಸರಬರಾಜು. ಪರಿಸರ ಮತ್ತು ಅರಣ್ಯ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ಸಚಿವರೂ ಹೌದು.