ಎರಡು ರಾಷ್ಟ್ರೀಯ ಪಕ್ಷಗಳು ಪರಸ್ಪರ ಕಚ್ಚಾಟದಲ್ಲಿ ತೊಡಗಿದ್ದರಿಂದ ಜನತೆಗೆ ನ್ಯಾಯ ದೊರೆಯುತ್ತಿಲ್ಲ. ಎರಡು ಪಕ್ಷಗಳು ಕಣ್ಣಮುಚ್ಚಾಲೆ ಆಟ ಬಿಡಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಇನ್ನಿತರ ಸೌಲಭ್ಯಗಳನ್ನು ಹೆಚ್ಚಿಸುವುದರಿಂದ ರಾಜ್ಯದ ಬೊಕ್ಕಸಕ್ಕೆ ಹೊರೆಯಾಗುವುದಿಲ್ಲ. ಕೂಡಲೇ ಅಂಗನವಾಡಿ ಉದ್ಯೋಗಿಗಳ ಬೇಡಿಕೆ ಈಡೇರಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದರು.
ಅಂಗನವಾಡಿ ಕಾರ್ಯಕರ್ತೆಯರು ಆಹೋರಾತ್ರಿ ರಸ್ತೆಯ ಮೇಲೆ ಮಲಗಿ ಪ್ರತಿಭಟನೆ ನಡೆಸುತ್ತಿದ್ದರೂ ಅವರಿಗೆ ಕುಡಿಯುವ ನೀರು ಕೊಡುವ ಸೌಜನ್ಯ ಕೂಡಾ ಸರಕಾರ ತೋರಿಲ್ಲ. ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುತ್ತಿರುವ ಕನಿಷ್ಠ ವೇತನ ಸಾಕಾಗುತ್ತಿಲ್ಲ. ದುಡಿಮೆಗೆ ತಕ್ಕ ಪ್ರತಿಫಲ ದೊರೆಯುತ್ತಿಲ್ಲ ಎನ್ನುವ ವೇದನೆ ಅವರನ್ನು ಕಾಡುತ್ತಿದೆ ಎಂದು ಕಿಡಿಕಾರಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ 10 ಸಾವಿರ ರೂಪಾಯಿ ವೇತನ ದೊರೆಯುವಂತೆ ಮಾಡುವುದು ಸರಕಾರದ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.
ಇಂದು ಸಂಜೆಯೊಳಗೆ ಬೇಡಿಕೆ ಈಡೇರಿಸದಿದ್ದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್,ಡಿ.ಕುಮಾರಸ್ವಾಮಿ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.