Publish Date: Tue, 21 Mar 2017 (15:42 IST)
Updated Date: Tue, 21 Mar 2017 (15:44 IST)
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಸದ್ಯಕ್ಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಸರಕಾರ ಹೇಳಿದ್ದರಿಂದ ಅನಿರ್ಧಿಷ್ಠಾವಧಿ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಅಂಗನವಾಡಿ ಕಾರ್ಯಕರ್ತೆಯರ ರಾಜ್ಯ ಸಮಿತಿ ಅಧ್ಯಕ್ಷೆ ವರಲಕ್ಷ್ಮಿ ಹೇಳಿದ್ದಾರೆ.
ರಾಜ್ಯದಲ್ಲಿ ಉಪಚುನಾವಣೆಗಳಿರುವುದರಿಂದ ಸದ್ಯಕ್ಕೆ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆದರೆ, ಉಪಚುನಾವಣೆಯಿದ್ದರೂ ನಮ್ಮ ಬೇಡಿಕೆಗಳನ್ನು ಈಡೇರಿಸಲೇಬೇಕು ಎಂದು ನಾವು ಪಟ್ಟು ಹಿಡಿದಿದ್ದೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ರಾಜ್ಯ ಸಮಿತಿ ಅಧ್ಯಕ್ಷೆ ವರಲಕ್ಷ್ಮಿ ಕಾರ್ಯಕರ್ತೆಯರನ್ನು ಉದ್ದೇಶಿಸಿ ಮಾತನಾಡಿ, ಏಪ್ರಿಲ್ 19 ರಂದು ಸಭೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿರುವುದಾಗಿ ವರಲಕ್ಷ್ಮಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.