Select Your Language

Notifications

webdunia
webdunia
webdunia
webdunia

ಸಿಎಂ ಭರವಸೆ: ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ವಾಪಸ್

anganwadi protest taken back said varalaxmi
ಬೆಂಗಳೂರು , ಗುರುವಾರ, 23 ಮಾರ್ಚ್ 2017 (19:35 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ ಎಂದು ಅಂಗನವಾಡಿ ನೌಕರರ ರಾಜ್ಯ ಸಮಿತಿ ಅಧ್ಯಕ್ಷೆ ವರಲಕ್ಷ್ಮಿ ಹೇಳಿದ್ದಾರೆ. 
 
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ನಡೆದ ಮಾತುಕತೆ ಫಲಪ್ರದವಾಗಿದ್ದು, ಏಪ್ರಿಲ್ 10 ರಂದು ಸಭೆ ಕರೆದಿದ್ದಾರೆ. ಸಭೆಯಲ್ಲಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. 
 
ಸರಕಾರದ ಮೇಲೆ ನಂಬಿಕೆಯಿಟ್ಟು ತಾತ್ಕಾಲಿಕವಾಗಿ ಮುಷ್ಕರವನ್ನು ಹಿಂಪಡೆದಿದ್ದೇವೆ. ಒಂದು ವೇಳೆ ಕೊಟ್ಟ ಮಾತು ಈಡೇರಿಸದಿದ್ದಲ್ಲಿ ಸಿಎಂ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ.
 
ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಅಂಗನವಾಡಿ ನೌಕರರ ಪ್ರತಿಭಟನೆಗೆ ಇತರ ಸಂಘಟನೆಗಳಿಂದ ಭಾರಿ ಬೆಂಬಲ ವ್ಯಕ್ತವಾಗಿತ್ತು. ಕೊನೆಗೂ ಹೋರಾಟ ಯಶಸ್ವಿಯಾಗಿರುವುದು ನಿರಾಳತೆ ತಂದಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸರಕಾರ ನಿಮ್ಮ ಬೇಡಿಕೆ ಈಡೇರಿಸಲು ಸಿದ್ದ, ಕೊಟ್ಟ ಮಾತು ತಪ್ಪೋಲ್ಲ: ಸಿಎಂ