Publish Date: Thu, 14 Sep 2023 (17:22 IST)
Updated Date: Thu, 14 Sep 2023 (17:25 IST)
ಶಾಲೆಗಳಲ್ಲಿ ಶಿಶುಪಾಲನ ಕೇಂದ್ರಗಳ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿರುವ ಅಂಗನವಾಡಿ ಕಾರ್ಯಕರ್ತರು
ನಾಳೆ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ.. ಮತ್ತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಆಕ್ರೋಶ ಭುಗಿಲೇಳುವ ಸಾಧ್ಯತೆ ದಟ್ಟವಾಗಿದೆ.. ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.. ಶಿಕ್ಷಣ ಇಲಾಖೆ 262 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವುದರ ಬಗ್ಗೆ ಸುತ್ತೋಲೆ ಹೊರಡಿಸಿದೆ.. ಶಿಕ್ಷಣ ಇಲಾಖೆಯ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ವ್ಯಕ್ತಪಡಿಸಿದ್ದಾರೆ.