Select Your Language

Notifications

webdunia
webdunia
webdunia
webdunia

ನ.20ರಿಂದ ಅಂಗನವಾಡಿ ಕಾರ್ಯಕರ್ತೆಯರ ಧರಣಿ

ನ.20ರಿಂದ ಅಂಗನವಾಡಿ ಕಾರ್ಯಕರ್ತೆಯರ ಧರಣಿ
bangalore , ಶನಿವಾರ, 18 ನವೆಂಬರ್ 2023 (17:05 IST)
ತಮ್ಮ ಬೇಡಿಕೆಯನ್ನು ಪೂರೈಸುವಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸರ್ಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ಮಾಡಲು ಸಜ್ಜಾಗಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಆಫ್ಲೈನ್ ಮೂಲಕ ನೇಮಕಾತಿ ಮಾಡಿಕೊಳ್ಳುಬೇಕೆಂದು, ನ.20ರಿಂದ AITUC ಜಯಮ್ಮ ನೇತೃತ್ವದಲ್ಲಿ ಫ್ರೀಡಂಪಾರ್ಕ್​ನಲ್ಲಿ ಅನಿರ್ಧಷ್ಟಾವಧಿವರೆಗೆ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಒಟ್ಟು 2877 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ 430 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು 1198 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಕಳೆದ 3-4 ವರ್ಷದಿಂದ ನೌಕರರನ್ನ ನೇಮಕ ಮಾಡಿಲ್ಲ. ಮಾರ್ಚ್ 5 ರಂದು ಭೌತಿಕ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಸಾಕಷ್ಟು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿ 8 ತಿಂಗಳು ಕಳೆದರು ಇಲಾಖೆಯ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ. ಅಂಗನವಾಡಿಯಲ್ಲಿ ಸಾಕಷ್ಟು ಕೆಲಸ ಪ್ರತಿನಿತ್ಯ ಇರುವುದರಿಂದ ಒಬ್ಬರ ಕೈಯಲ್ಲಿ ನಿಭಾಯಿಸಲು ಸಾಧ್ಯವಿಲ್ಲ. ಆದ್ದರಿಂದ ಕೂಡಲೇ ನೇಮಕಾತಿ ಮಾಡಿಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು, ನಾಳೆ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆ