Select Your Language

Notifications

webdunia
webdunia
webdunia
webdunia

ರಾಮನಗರ ಉಪಚುನಾವಣೆಗೆ ನಾನೇ ಅಭ್ಯರ್ಥಿ ಎಂದ ಅನಿತಾ ಕುಮಾರಸ್ವಾಮಿ

ರಾಮನಗರ ಉಪಚುನಾವಣೆಗೆ ನಾನೇ ಅಭ್ಯರ್ಥಿ ಎಂದ ಅನಿತಾ ಕುಮಾರಸ್ವಾಮಿ
ರಾಮನಗರ , ಭಾನುವಾರ, 7 ಅಕ್ಟೋಬರ್ 2018 (18:15 IST)
ರಾಮನಗರ, ಜಮಖಂಡಿ ಉಪಚುನಾವಣೆಗೆ ದಿನಗಣನೆ ಆರಂಭಗೊಂಡಿದೆ. ಏತನ್ಮಧ್ಯೆ ಜೆಡಿಎಸ್ ನಿಂದ ನಾನೇ ಅಭ್ಯರ್ಥಿ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರ ಪತ್ನಿ ಅನಿತಾಕುಮಾರಸ್ವಾಮಿ ಹೇಳಿದ್ದಾರೆ.

ರಾಮನಗರ ಕ್ಷೇತ್ರದ ಜನತೆಯ ಒತ್ತಾಸೆಯಂತೆ ನಾನೇ ಸ್ಪರ್ಧೆ ಮಾಡ್ತೇನೆ ಎಂದು ಜೆಡಿಎಸ್ ಟಿಕೆಟ್ ಆಕಾಂಕ್ಷಿ ಹಾಗೂ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ರಾಮನಗರ ಕ್ಷೇತ್ರ ನಮ್ಮ ಕುಟುಂಬದ ಪುಣ್ಯಭೂಮಿಯಾಗಿದೆ. ಕಾರ್ಯಕರ್ತರು ಮತ್ತು ಮುಖಂಡರೇ ನಮ್ಮ ಶಕ್ತಿಯಾಗಿದ್ದಾರೆ.
ಇನ್ನೆರಡು ದಿನದಲ್ಲೇ ರಾಮನಗರದಿಂದ ಸ್ಪರ್ಧೆ ಮಾಡೋದು ನಾನೇ ಎಂಬುದು ಅಧಿಕೃತಗೊಳ್ಳಲಿದೆ ಎಂದು ಹೇಳಿದರು.
ನಮ್ಮ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಕ್ಷೇತ್ರದ ಮತದಾರರ ಆಶೀರ್ವಾದ ನಮ್ಮ ಕುಟುಂಬದ ಮೇಲೆ ಮೊದಲಿನಿಂದಲೂ ಇದೆ ಎಂದು ರಾಮನಗರದಲ್ಲಿ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಅ. 28ಕ್ಕೆ ದತ್ತಪೀಠ ಚಲೋ