Webdunia - Bharat's app for daily news and videos

Install App

ಅಂಜನಾದ್ರಿ ಅಭಿವೃದ್ಧಿ ಕೂರಿತು ಸಭೆ

Webdunia
ಶನಿವಾರ, 25 ಜೂನ್ 2022 (20:25 IST)
ಸಿಎಂ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತು ಸಭೆ ನಡೆಸಲಾಯಿತು. ಸಭೆ ಬಳಿಕ ಮಾತನಾಡಿದ ಸಚಿವ ಆನಂದ್ ಸಿಂಗ್, ಹನುಮನ ಜನ್ಮಸ್ಥಳ ಗೊಂದಲ ವಿಚಾರವಾಗಿ ಚರ್ಚೆ ನಡೆದಿದೆ. ಕೇಂದ್ರ ಪುರಾತತ್ವ ಇಲಾಖೆ ಹಾಗೂ ರಾಜ್ಯ ಪುರಾತತ್ವ ಇಲಾಖೆಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ಅಂಜನಾದ್ರಿ ಬೆಟ್ಟದ ದಾಖಲೆಗಳ ಪರಿಶೀಲನೆ ಹಾಗೂ ಸಂಶೋಧನೆ ಬಳಿಕ ಒಂದು ಅಧಿಕೃತವಾಗಿ ಅಲ್ಲಿ ಬೋರ್ಡ್ ಹಾಕಲು ಸಿಎಂ ಸೂಚನೆ ನೀಡಿದ್ದಾರೆ. ಕಿಷ್ಕಿಂದೆ ಹನುಮ ಹುಟ್ಟಿದ ಸ್ಥಳ ಹೇಗಾಯ್ತು? ಇತಿಹಾಸ ಪುಟದಲ್ಲಿ ಏನಿದೆ? ಕಿಷ್ಕಿಂದೆಯಲ್ಲಿ ಇನ್ಮುಂದೆ ಯಾರು ಚಕಾರ ಎತ್ತಬಾರದು ಅನ್ನುವುದು ಸೇರಿದಂತೆ ವಿವಿಧ ವಿಚಾರಗಳಿಗೆ ಕೊನೆ ಹಾಡಬೇಕು. ಅದಕ್ಕಾಗಿ ಸಿಎಂ ಸೂಚನೆ ಕೊಟ್ಟಿದ್ದಾರೆ ಎಂದರು. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಈಗಾಗಲೇ ನೀಡಿರುವ 100 ಕೋಟಿ ಅನುದಾನ ಕೋಡಲೇ ಬಿಡುಗಡೆ ಮಾಡಲು ಸಿಎಂ ಸೂಚನೆ ಕೊಟ್ಟಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ. ಅಂಜನಾದ್ರಿ ಬೆಟ್ಟದಲ್ಲಿ ಪಾರ್ಕಿಂಗ್, ರೋಪ್ ವೇ, ರಸ್ತೆ ನಿರ್ಮಾಣ ಹಾಗೂ ಫುಟಪಾಥ್ ಕಾಮಗಾರಿಗೆ ಹಣ ಬಿಡುಗಡೆ ಮಾಡುವಂತೆ ಸಿಎಂ ತಿಳಿಸಿದ್ದಾರೆ. ಜೊತೆಗೆ ಎರಡು ತಿಂಗಳೊಳಗೆ ಎಲ್ಲಾ ಕಾಮಗಾರಿಗಳಿಗೂ ಅಡಿಗಲ್ಲು ಹಾಕಲು ಹೇಳಿದ್ದಾರೆ. ಜುಲೈ 15ರೊಳಗೆ ಸಿಎಂ ಬೊಮ್ಮಾಯಿ ಸಹ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments