Select Your Language

Notifications

webdunia
webdunia
webdunia
webdunia

ಮುಜರಾಯಿ ಇಲಾಖೆಗೆ ಆಂಜನೇಯ ದೇಗುಲ: ಆಕ್ರೋಶದ ಬೆನ್ನಲ್ಲೇ ಸ್ಪಷ್ಟನೆ ಕೊಟ್ಟ ರಾಮಲಿಂಗಾರೆಡ್ಡಿ

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ

Sampriya

ಬೆಂಗಳೂರು , ಶುಕ್ರವಾರ, 11 ಜುಲೈ 2025 (15:00 IST)
Photo Credit X
ಬೆಂಗಳೂರು: ಆಂಜನೇಯ ದೇಗುಲವನ್ನು ಮುಜುರಾಯಿ ಇಲಾಖೆ ಸುಪರ್ದಿಗೆ ತೆಗೆದುಕೊಂಡ ನಂತರ ದೇವಸ್ಥಾನದ ಆಡಳಿತ ಮಂಡಳಿ ಇದೀಗ ಆಕ್ರೋಶ ಹೊರಹಾಕಿದೆ. 

ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿದ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು, 5 ವರ್ಷದ ನಂತರ ದೇಗುಲವನ್ನು ಟ್ರಸ್ಟ್‌ಗೆ ವಾಪಸ್ ಕೊಡುತ್ತೇವೆ ಎಂದಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಳಿ ಆಂಜನೇಯ ಸ್ವಾಮಿ ದೇಗುಲದಲ್ಲಿ ಹಣ ದುರುಪಯೋಗವಾಗಿದ್ದರಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಇದು ತಾತ್ಕಲಿಕ ಅಷ್ಟೇ. 5 ವರ್ಷದ ಬಳಿಕ ದೇಗುಲವನ್ನು ಮಂಡಳಿಗೆ ವಾಪಸ್ ಕೊಡುತ್ತೇವೆ. 

ಮುಜರಾಯಿ ಇಲಾಖೆ ಸಲ್ಲಿಸಿದ ವರದಿಯಲ್ಲಿ ಹಣಕಾಸಿನ ಲೆಕ್ಕವಿಲ್ಲ. ಯಾವುದೇ ದೇವಸ್ಥಾನದಲ್ಲಿ ಹಣಕಾಸಿನ ದುರುಪಯೋಗ ಆದರೆ ಅದನ್ನು ವಶಕ್ಕೆ ಪಡೆದುಕೊಳ್ಳುವ ಅಧಿಕಾರ ಸರ್ಕಾರಕ್ಕಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಸುಮಾರು 10 ದೇವಾಲಯಗಳನ್ನು ವಶಕ್ಕೆ ಪಡೆದುಕೊಂಡಿತ್ತು ಎಂದು ಹೇಳಿದರು.

ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆಯ ಸಂದರ್ಭದಲ್ಲಿ ಸಿಬ್ಬಂದಿಯೇ ಕಳ್ಳತನ ಮಾಡಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದು ದೇವಾಲಯದಲ್ಲಿ ಆಡಳಿತ ನಿರ್ವಹಣೆ ಸರಿ ಇಲ್ಲ ಎಂಬುದನ್ನು ತೋರಿಸಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ನಂಬಿಕೆ ದ್ರೋಹ: ಬಹುಭಾಷಾ ನಟ ಪ್ರಕಾಶ್‌ ರಾಜ್ ವಾಗ್ದಾಳಿ