Publish Date: Tue, 16 Jun 2020 (20:12 IST)
Updated Date: Tue, 16 Jun 2020 (20:14 IST)
ಅವಿವಾಹಿತರಾಗಿದ್ದ ಅಣ್ಣ ಹಾಗೂ ತಂಗಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಅನಾರೋಗ್ಯ ಹಾಗೂ ಖಿನ್ನತೆಗೆ ಒಳಗಾಗಿದ್ದ ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನ ನೀಲಯ್ಯ ಶೆಟ್ಟಿಗಾರ್ (43), ಕೇಸರಿ (39) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ತಂದೆ, ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ ಬಳಿಕ ಇವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಅಲ್ಲದೇ ಅನಾರೋಗ್ಯ ಹಾಗೂ ಹಣಕಾಸಿನ ಸಮಸ್ಯೆಯಿಂದ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.