Publish Date: Sat, 29 Feb 2020 (18:54 IST)
Updated Date: Sat, 29 Feb 2020 (18:57 IST)
ರಾಜ್ಯದಲ್ಲಿ ನೂತನವಾಗಿ ಘೋಷಿಸಿರುವ ತಾಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಶೀಘ್ರ ಚಾಲನೆ ದೊರೆಯೋ ಸಾಧ್ಯತೆಗಳಿವೆ.
ರಾಜ್ಯದಲ್ಲಿ ನೂತನವಾಗಿ ಘೋಷಿಸಿರುವ ತಾಲೂಕುಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಹೆಚ್ಚಿನ ಅನುದಾನ ಕೋರಿ ಆಯವ್ಯಯದ ಪೂರ್ವಭಾವಿ ಸಭೆಯಲ್ಲಿ ಬೇಡಿಕೆ ಇಡಲಾಗಿದೆ.
ಹೀಗಾಗಿ ನೂತನ ತಾಲೂಕುಗಳಲ್ಲಿ ಶೀಘ್ರ ಮಿನಿ ವಿಧಾನಸೌಧ ನಿರ್ಮಾಣ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.
ಕಲಬುರಗಿ ನಗರದಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಅನುಕೂಲವಾಗಲೆಂದು ಮತ್ತು ವಿವಿಧ ಸೇವೆಗಳನ್ನು ನೀಡುವ ಇಲಾಖೆಗಳು ಒಂದೇ ಕಡೆ ತರುವ ಪ್ರಯತ್ನ ಇದಾಗಿದೆ ಎಂದರು.
ನೋಂದಣಿ ಕಚೇರಿಗಳಲ್ಲಿ ಆಸ್ತಿ ನೊಂದಣಿ ಸಂದರ್ಭದಲ್ಲಿ ತಾಂತ್ರಾಂಶದಲ್ಲಿ ಓ.ಟಿ.ಪಿ. ಬರಲು ತಡವಾಗುತ್ತಿದೆ. ಇದು ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದನ್ನು ಸರಳೀಕರಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸ್ಪಷ್ಟಪಡಿಸಿದರು.