Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿನಿಯ ಸಾವಿಗೆ ಕಾರಣವಾಯ್ತು ಅನಾಮಧೇಯ ಪತ್ರ. ಹಾಗಾದ್ರೆ ಆ ಪತ್ರ ಯಾವುದು ಗೊತ್ತಾ?

ವಿದ್ಯಾರ್ಥಿನಿಯ ಸಾವಿಗೆ ಕಾರಣವಾಯ್ತು ಅನಾಮಧೇಯ ಪತ್ರ. ಹಾಗಾದ್ರೆ ಆ ಪತ್ರ ಯಾವುದು ಗೊತ್ತಾ?
ಮುಂಬೈ , ಶುಕ್ರವಾರ, 25 ಜನವರಿ 2019 (07:01 IST)
ಮುಂಬೈ : ಅನಾಮಧೇಯ ಪ್ರೇಮ ಪತ್ರದಿಂದ ತರಗತಿಯಲ್ಲಿ ಅವಮಾನವಾದ ಕಾರಣ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಪಂಡರಾಪುರದಲ್ಲಿ ನಡೆದಿದೆ.


ಪಂಡರಾಪುರದ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ತರಗತಿಯ ವೇಳೆ ಹಿಂದೆ ಇದ್ದ ಸಹಪಾಠಿಯೊಬ್ಬರು ಅನಾಮಧೇಯ ಪ್ರೇಮ ಪತ್ರ ನೀಡಿದ್ದಾರೆ. ಆ ವೇಳೆ ಅದನ್ನು ನೋಡಿದ ಶಿಕ್ಷಕಿ ಮನಬಂದಂತೆ ನಿಂದಿಸಿದ್ದಲ್ಲದೇ ಆಕೆಯ ಪೋಷಕರಿಗೆ ಕರೆ ಮಾಡಿ ಕಂಪ್ಲೇಂಟ್ ಮಾಡಿದ್ದಾರೆ.


ಇದರಿಂದ ಮನನೊಂದ ವಿದ್ಯಾರ್ಥಿನಿ ಮನೆಗೆ ಬಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಾಲೆಯಲ್ಲಿ ಅವಮಾನ ಮಾಡಿದ ಕಾರಣ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿಕ್ಷಕಿ ಹಾಗೂ ಶಾಲಾ ಆಡಳಿತ ಮಂಡಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮೃತ ವಿದ್ಯಾರ್ಥಿನಿ ಪೋಷಕರು ಹಾಗೂ ವಾಖ್ರಿ ಗ್ರಾಮಸ್ಥರು ಪಂಡರಾಪುರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿ  ಪ್ರತಿಭಟನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಕಾಂಗ್ರೆಸ್ ಮುಗಿಸೋದಕ್ಕೆ ಪಕ್ಷ ಸೇರಿಕೊಂಡಿದ್ದಾರೆ ಎಂದ ಕಾಂಗ್ರೆಸ್ ಹಿರಿಯ ಮುಖಂಡ