Publish Date: Fri, 10 Jun 2022 (14:19 IST)
Updated Date: Fri, 10 Jun 2022 (14:22 IST)
ಬೆಂಗಳೂರಿನ ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ದಾಳಿ ಪ್ರಕರಣ ನಡೆದಿದೆ.
ಬೆಂಗಳೂರಿನ ಸಾರಕ್ಕಿ ಬಳಿ ವಿವಾಹಿತ ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದ್ದು, ಮಹಿಳೆ ಬಲಗಣ್ಣಿಗೆ ಗಂಭೀರ ಗಾಯ ಆಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿವಾಹಿತ ಮಹಿಳೆಯನ್ನು ಪ್ರೀತಿಸುತ್ತಿದ್ದ ಆರೋಪಿ ಅಹ್ಮದ್, ಮದುವೆಯಾಗುವಂತೆ ದುಂಬಾಲು ಬಿದ್ದಿದ್ದ. ಇದಕ್ಕೆ ಒಪ್ಪದಿದ್ದಾಗ ಆರೋಪಿ ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ಆ್ಯಸಿಡ್ ದಾಳಿಯಿಂದ ಗಾಯಗೊಂಡಿರುವ ಮಹಿಳೆ ಬಲಗಣ್ಣಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.