Select Your Language

Notifications

webdunia
webdunia
webdunia
webdunia

ಶ್ರದ್ಧಾಳಂತೆ ಮತ್ತೊಂದು ಬರ್ಬರ ಹತ್ಯೆ

ಶ್ರದ್ಧಾಳಂತೆ ಮತ್ತೊಂದು ಬರ್ಬರ ಹತ್ಯೆ
ದೆಹಲಿ , ಸೋಮವಾರ, 28 ನವೆಂಬರ್ 2022 (14:47 IST)
ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ನಡುವೆ ದೆಹಲಿಯಲ್ಲಿ ಅಂತದ್ದೇ ಮತ್ತೊಂದು ಪ್ರಕರಣ ಬಹಿರಂಗವಾಗಿದೆ, ಇದೀಗ ಈ ಪ್ರಕರಣ ಮತ್ತೊಮ್ಮೆ ದೆಹಲಿಯನ್ನು ಬೆಚ್ಚಿಬೀಳಿಸಿದೆ. ಪೊಲೀಸರು ಶ್ರದ್ಧಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಇದೀಗ ಅವರು ಮತ್ತೊಂದು ಇಂತದೇ ಕೊಲೆ ಪ್ರಕರಣವನ್ನು ಪತ್ತೆ ಮಾಡಿದ್ದಾರೆ. ಪೂರ್ವ ದೆಹಲಿಯಲ್ಲಿ ಒಬ್ಬ ವ್ಯಕ್ತಿಯ ಕತ್ತರಿಸಿದ ದೇಹದ ಭಾಗಗಳನ್ನು ಅವರು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಬ್ರಾಂಚ್ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ದೆಹಲಿಯ ಪಾಂಡವನಗರದ ಮಹಿಳೆ ಮತ್ತು ಆಕೆಯ ಮಗನನ್ನು ಅಪರಾಧ ವಿಭಾಗ ಬಂಧಿಸಿದೆ. ತಾಯಿ ಮತ್ತು ಮಗ ಜತೆ ಸೇರಿ ಪತಿಯನ್ನು ಕೊಂದು ಶವವನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟಿದ್ದಾರೆ. ಇಬ್ಬರೂ ಬೇರೆ ಬೇರೆ ದಿನಗಳಲ್ಲಿ ಬಂದು ಮಧ್ಯರಾತ್ರಿಯಲ್ಲಿ ಮೃತದೇಹದ ಭಾಗಗಳನ್ನು ಚಾಂದ್ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದಿದ್ದರು. ತಂದೆಗೆ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧವಿತ್ತು ಎಂದು ತನಿಖೆಯ ವರದಿ ತಿಳಿಸಿದೆ. ಅದಕ್ಕಾಗಿಯೇ ಮಗ ತಾಯಿಯೊಂದಿಗೆ ಸೇರಿ ಈ ಕೃತ್ಯವನ್ನು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಹೆಸರು ಪೂನಂ ಮತ್ತು ಮಗನ ಹೆಸರು ದೀಪಕ್ ಹಾಗೂ ಮೃತರ ಹೆಸರು ಅಂಜನ್ ದಾಸ್ ಎಂದು ಹೇಳಲಾಗಿದೆ. ತಾಯಿ ಮತ್ತು ಮಗ ಇಬ್ಬರೂ ಮೃತ ಅಂಜನ್ ದಾಸ್‌ಗೆ ಮೊದಲು ಅಮಲು ಮಾತ್ರೆಗಳನ್ನು ತಿನ್ನಿಸಿ, ನಂತರ ಕೊಂದಿದ್ದಾರೆ. ಕೊಂದ ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮಾಡಿ ಫ್ರಿಡ್ಜ್ ನಲ್ಲಿಟ್ಟಿದ್ದರು. ಯಾರಿಗೂ ಅನುಮಾನ ಬರದಂತೆ ಬೇರೆ ಬೇರೆ ದಿನಗಳಲ್ಲಿ, ಮಧ್ಯರಾತ್ರಿಯಲ್ಲಿ, ಮೃತ ದೇಹಗಳ ತುಂಡುಗಳನ್ನು ಚಾಂದ್ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದಿದ್ದರು. ದೆಹಲಿ ಪೊಲೀಸರು ಸದ್ಯ ಆರೋಪಿಗಳಾದ ಪೂನಂ ಮತ್ತು ದೀಪಕ್ ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಶವ ಪತ್ತೆ