Publish Date: Fri, 13 Mar 2020 (11:19 IST)
Updated Date: Fri, 13 Mar 2020 (11:21 IST)
ಬೆಂಗಳೂರು : ಸ್ವಿಫ್ಟ್ ಡಿಸೈರ್ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನಪ್ಪಿದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಯಂಟಗಾನಹಳ್ಳಿ ಬಳಿ ನಡೆದಿದೆ.
ಹಾಸನದಿಂದ ಬೆಂಗಳೂರಿಗೆ ಹೊರಟಿದ್ದ ಸ್ವಿಫ್ಟ್ ಡಿಸೈರ್ ಕಾರು ಡಿವೈಡರ್ ಹಾರಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇನ್ನು ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.