Publish Date: Sat, 21 Dec 2024 (16:40 IST)
Updated Date: Sat, 21 Dec 2024 (16:42 IST)
ಬೆಂಗಳೂರು: ನಮ್ಮ ಮುಂದೆ ಸಾಗುತ್ತಿದ್ದ ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಮತ್ತೊಂದು ಅನಾಹುತ ನಡೆಯಿತು ಎಂದು ನೆಲಮಂಗಲದಲ್ಲಿ ನಡೆದ ಸರಣಿ ಅಪಘಾತದ ಬಗ್ಗೆ ಲಾರಿ ಚಾಲಕ ಆರೀಫ್ ಹೇಳಿದ್ದಾರೆ.
ಡಾಬಸ್‌ಪೇಟೆಯಿಂದ ಬೆಂಗಳೂರಿನ ಕಡೆಗೆ ನಾನು ಸಾಗುತ್ತಿದೆ. ನನ್ನ ಮುಂದಿನ ಕಾರನ್ನು ಬಚಾವ್ ಮಾಡಲು ಹೋಗಿ ಹೀಗೆ ಆಗಿದೆ. ಲಾರಿ ಡಿವೈಡರ್ ದಾಟಿ ಮುಂದಿನ ರಸ್ತೆಗೆ ಪಲ್ಟಿ ಆಯ್ತು. ಅಲ್ಲಿ ಏನಾಯ್ತು ಆಮೇಲೆ ಅನ್ನೋದು ಗೊತ್ತಿಲ್ಲ. ಕಾರಿನ ಮೇಲೆ ನನ್ನ ಲಾರಿ ಪಲ್ಟಿಯಾಗಿತ್ತು ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೀಫ್ ಹೇಳಿದ್ದಾರೆ.
ನೆಲಮಂಗಲದ ಟಿ.ಬೇಗೂರು ಬಳಿಯ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿಇಂದು ಮಧ್ಯಾಹ್ನ ನಡೆದ ಎರಡು ಕಾರು, ಎರಡು ಲಾರಿ ಹಾಗೂ ಸ್ಕೂಲ್ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದುರ್ಮರಣಕ್ಕೀಡಾಗಿದ್ದರು.
ಇದರಿಂದ ತುಮಕೂರು ರಸ್ತೆಯಲ್ಲಿ ಸುಮಾರು 10 ಕಿಮೀ ನಷ್ಟು ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.