Webdunia - Bharat's app for daily news and videos

Install App

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ

Krishnaveni K
ಶುಕ್ರವಾರ, 10 ಮೇ 2024 (11:54 IST)
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮೈಸೂರಿನಲ್ಲಿ ಮಹಿಳೆಯ ಅಪಹರಣ ಪ್ರಕರಣಕ್ಕೂ ಇದಕ್ಕೂ ಸಂಬಂಧವಿದೆ ಎನ್ನಲಾಗಿದೆ.

ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಇದೀಗ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಪ್ರಜ್ವಲ್ ವಿರುದ್ಧ ಕೇಸ್ ದಾಖಲಿಸಿದ ಪೊಲೀಸರು ಸಂತ್ರಸ್ತೆಯನ್ನು ಪೊಲೀಸರ ಎದುರು ಹಾಜರುಪಡಿಸಿದ್ದಾರೆ. ಜೊತೆಗೆ ಸ್ಥಳ ಮಹಜರನ್ನೂ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಇನ್ನೂ ಭಾರತಕ್ಕೆ ಬಂದಿಲ್ಲ. ಅವರ ಪತ್ತೆಗೆ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆಯಾದರೂ ಇದುವರೆಗೆ ಪತ್ತೆಯಾಗಿಲ್ಲ. ಹೀಗಾಗಿ ಅವರನ್ನು ಭಾರತಕ್ಕೆ ಕರೆತರಲು ತನಿಖಾ ತಂಡ  ಕಾರ್ಯಪ್ರವೃತ್ತವಾಗಿದೆ.

ಮಹಿಳೆಯ ಅಪಹರಣ ಪ್ರಕರಣದಲ್ಲಿ ಈಗಾಗಲೇ ಪ್ರಜ್ವಲ್ ರೇವಣ್ಣ ತಂದೆ, ಮಾಜಿ ಸಚಿವ ಎಚ್ ಡಿ ರೇವಣ್ಣರನ್ನು ಬಂಧಿಸಲಾಗಿದೆ. ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ. ಮೇ 14 ರವರೆಗೆ ಅವರ ನ್ಯಾಯಾಂಗ ಬಂಧನ ಅವಧಿ ಇರಲಿದೆ. ಇದರ ನಡುವೆ ಪ್ರಜ್ವಲ್ ಮಾತ್ರ ಭಾರತಕ್ಕೆ ಬರದೇ ನುಣುಚಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

ಮತಪರಿಷ್ಕರಣೆ ಯಾಕೆ ಮುಖ್ಯ ಎನ್ನುವುದಕ್ಕೆ ಬಿಹಾರದ ಈ ಘಟನೆಯೇ ಸಾಕ್ಷಿ

ಮುಂದಿನ ಸುದ್ದಿ