Publish Date: Fri, 14 Oct 2022 (17:07 IST)
Updated Date: Fri, 14 Oct 2022 (17:10 IST)
ಕಿರುಕುಳ ಆರೋಪದ ಮೇಲೆ ಜೈಲಿನಲ್ಲಿ ವಿಚಾರಣೆ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇದೀಗ ಮತ್ತಿಬ್ಬರು ಅಪ್ರಾಪ್ತ ಬಾಲಕಿಯರಿಗೆ ಅಂತದ್ದೇ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮಠದಲ್ಲಿ ಕೆಲಸ ಮಾಡುತ್ತಿರುವ ನೌಕರರ ಮಕ್ಕಳಿಗೆ ಕಿರುಕುಳ ನೀಡಿದ ಶ್ರೀಗಳು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅದರಂತೆ ಎಫ್ ಆರ್ ದಾಖಲಿಸಿಕೊಂಡಿದ್ದು, ಬಳಿಕ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಸದ್ಯ ಜೈಲಿನಲ್ಲಿರುವ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುರುಘಾ ಮಠದ ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರ ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನ ಪೂರ್ಣಗೊಂಡಿತು. ಶ್ರೀಗಳನ್ನು ಬಂಧಿಸಿದ ಆರೋಪಿ ಠಾಣೆಗೆ ಕರೆದೊಯ್ದಿದ್ದರು.