ಮೈಸೂರು: ಮುಡಾ ಹಗರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ ಹಾಗೂ ಗಡಿಪಾರಿಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಶನಿವಾರ ಇಲ್ಲಿನ ಲಕ್ದ್ಮಿಪುರಂ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ' ಎರಡು ತಿಂಗಳ ಹಿಂದೆ ಸ್ನೇಹಮಯಿ ಕೃಷ್ಣ ಅವರ ಸ್ನೇಹಿತರು ಎಂದು ಹೇಳಿ ನನ್ನನ್ನು ಸಂಪರ್ಕಿಸಿದರು. ಪ್ರಕರಣ ಮುಚ್ಚಿ ಹಾಕಲು ಹಣಕ್ಕೆ ಬೇಡಿಕೆಯಿಟ್ಟಿದ್ದರು. ಮೂರು ದಿನದ ಹಿಂದೆ ಮತ್ತೆ ನನ್ನನ್ನು ಈ ಇಬ್ಬರೂ ಸಂಪರ್ಕಿಸಿದ್ದು, ನನಗೆ ಬೆದರಿಕೆ ಹಾಕಿದ್ದಾರೆ. ಸ್ನೇಹಮಯಿ ಕೃಷ್ಣ ವಿರುದ್ಧ ಆರೋಪ ಮುಂದುವರಿಸಿದರೆ ನಿಮ್ಮ ವಿರುದ್ಧವೂ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.
ರಾಜ್ಯದ ವಿವಿಧ ಠಾಣೆಗಳಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ 44 ಪ್ರಕರಣ ದಾಖಲಾಗಿದೆ. ಇದರಲ್ಲಿ 22 ಪ್ರಕರಣಗಳ ಎಫ್ ಐಆರ್ ನಮ್ಮಲ್ಲಿದೆ. ಈತ ರೌಡಿಶೀಟರ್ ಅಗಿದ್ದರೂ ಇದುವರೆಗೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಈ ಸಂಬಂಧ ಸ್ನೇಹಮಯಿ ಕೃಷ್ಣ ಬಂಧನ ಹಾಗೂ ಗಡಿಪಾರಿಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಶನಿವಾರ ಇಲ್ಲಿನ ಲಕ್ದ್ಮಿಪುರಂ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದರು.