Publish Date: Tue, 20 Feb 2018 (09:17 IST)
Updated Date: Tue, 20 Feb 2018 (09:18 IST)
ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣ ಮಾಸುವ ಮೊದಲೇ ಅಂತಹದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಕಾಂಗ್ರೆಸ್ ಶಾಸಕ ಬೈರತಿ ಬಸವರಾಜು ಆಪ್ತ, ಕೆಆರ್ ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣ ಸ್ವಾಮಿ ಸರ್ಕಾರಿ ಕಚೇರಿಗೆ ಬಂದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ.
ಬಿಬಿಎಂಪಿ ಕಚೇರಿಗೆ ಬಂದು ಜಮೀನಿಗೆ ಅಕ್ರಮವಾಗಿ ಖಾತೆ ಮಾಡಿಕೊಡುವಂತೆ ಬಿಬಿಎಂಪಿ ಅಧಿಕಾರಿಗೆ ಒತ್ತಡ ಹಾಕಿದ್ದಾರೆ. ಆದರೆ ಅದಕ್ಕೆ ಅಧಿಕಾರಿಗಳು ಒಪ್ಪದಿದ್ದಾಗ ರೊಚ್ಚಿಗೆದ್ದ ನಾರಾಯಣಸ್ವಾಮಿ ಕಚೇರಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಲ್ಲದೆ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದಾನೆ. ಈ ವಿಡಿಯೋಗಳನ್ನು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕುಕ್ಕೆ ಸುಬ್ರಮಣ್ಯದಲ್ಲಿ ಸರ್ಪ ಸಂಸ್ಕಾರ ರದ್ದುಗೊಳಿಸಿದ್ದೇಕೆ?