Select Your Language

Notifications

webdunia
webdunia
webdunia
webdunia

ಸಿಎಂ ಎಷ್ಟೇ ತೇಪೆ ಹಚ್ಚಿದರೂ ಸತ್ಯವನ್ನ ಮುಚ್ಚಿಡಲು ಸಾಧ್ಯವಿಲ್ಲ: ಆರ್‌ ಅಶೋಕ್‌

Guarantee Schemes Side Effect, Congress MLA HR Gaviyappa, Opposition Leader R Ashok,

Sampriya

ಬೆಂಗಳೂರು , ಮಂಗಳವಾರ, 26 ನವೆಂಬರ್ 2024 (15:58 IST)
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದಾಗಿ ಕ್ಷೇತ್ರಕ್ಕೆ ಬರುತ್ತಿದ್ದ ಅನುದಾನ ಕಡಿತವಾಗಿದ್ದು, ಒಂದೆರಡು ಗ್ಯಾರಂಟಿ ಯೋಜನೆಗಳನ್ನು ಕೈ ಬಿಡಬೇಕೆಂದು ಸಿಎಂ ಬಳಿ ಕಾಂಗ್ರೆಸ್‌ ಶಾಸಕ ಎಚ್‌ ಆರ್‌ ಗವಿಯಪ್ಪ ಮನವಿ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದೀಗ ಈ ಸಂಬಂಧ ವಿಪಕ್ಷ ನಾಯಕ ಆರ್‌ ಅಶೋಕ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ, ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ಸಿಎಂ ಸಿದ್ದರಾಮಯ್ಯ  ಅವರು ಎಷ್ಟೇ ತೇಪೆ ಹಚ್ಚಿದರೂ ಸತ್ಯವನ್ನ ಮುಚ್ಚಿಡಲು ಸಾಧ್ಯವಿಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ.

ಗ್ಯಾರೆಂಟಿಗಳಿಂದ ಸರ್ಕಾರ ದಿವಾಳಿ ಎಂದು ಮತ್ತೊಬ್ಬ ಕಾಂಗ್ರೆಸ್ ಶಾಸಕರ ಅಳಲು!

ವಿಜಯನಗರ ಜಿಲ್ಲೆಯ ಹೊಸಪೇಟೆ ಕಾಂಗ್ರೆಸ್  ಶಾಸಕ ಹೆಚ್.ಆರ್.ಗವಿಯಪ್ಪ ಅವರು ಕ್ಷೇತ್ರವನ್ನು
ಅಭಿವೃದ್ಧಿ ಮಾಡಲು ಸರಿಯಾಗಿ ಅನುದಾನ ಸಿಗುತ್ತಿಲ್ಲ ಎಂದು ಕಳೆದ ಕೆಲವು ದಿನಗಳ ಹಿಂದೆ ಸರ್ಕಾರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು.

ಇದೀಗ ಗ್ಯಾರಂಟಿ ಯೋಜನೆಗಳಲ್ಲಿ ಒಂದೆರಡನ್ನು ತೆಗೆದು ಹಾಕಿದರೆ ವಸತಿ ನಿರ್ಮಾಣ ಮುಂತಾದ ಯೋಜನೆಗಳಿಗೆ ಅನುದಾನ ನೀಡಲು ಅನುಕೂಲವಾಗಲಿದೆ ಎಂದು ಗ್ಯಾರಂಟಿ ತೆರವಿಗೆ ಆಗ್ರಹಿಸಿದ್ದಾರೆ.

ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಎಷ್ಟೇ ತೇಪೆ ಹಚ್ಚಿದರೂ ಸತ್ಯವನ್ನ ಮುಚ್ಚಿಡಲು ಸಾಧ್ಯವಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್‌ ಶಿಂಧೆ ರಾಜೀನಾಮೆ: ಯಾರಾಗುತ್ತಾರೆ ಮಹಾ ಸಾರಥಿ