Publish Date: Thu, 14 Dec 2017 (15:01 IST)
Updated Date: Thu, 14 Dec 2017 (15:05 IST)
ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ರವಿ ಬೆಳಗೆರೆ ಮಧ್ಯಂತರ ಜಾಮೀನು ಪಡೆದುಕೊಂಡ ಬೆನ್ನಲ್ಲೇ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆರೆಸ್ಟ್ ವಾರಂಟ್ ಜಾರಿ ಮಾಡಿದೆ.
ಕೂಡಲೇ ರವಿ ಬೆಳಗೆರೆಯನ್ನು ದಸ್ತಗಿರಿ ಮಾಡಿ ಹಾಜರುಪಡಿಸುವಂತೆ ಕೋರ್ಟ್ ಸಂಜಯನಗರ ಪೊಲೀಸರಿಗೆ ಸೂಚನೆ ನೀಡಿದೆ.
ಸುಮಾರು ಏಳು ವರ್ಷಗಳ ಹಿಂದೆ ಬೆಳಗೆರೆ ವಿರುದ್ಧ ದಾಖಲಾಗಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆರೆಸ್ಟ್ ವಾರಂಟ್ ಅನ್ನು ಜಾರಿ ಮಾಡಿದೆ.
ಹಾಯ್ ಬೆಂಗಳೂರಿನಲ್ಲಿ 7 ವರ್ಷದ ಹಿಂದೆ ಮಹಿಳೆಯೊಬ್ಬರ ಬಗ್ಗೆ ವರದಿಯೊಂದು ಪ್ರಕಟವಾಗಿತ್ತು. ನೊಂದ ಮಹಿಳೆ ತನ್ನ ತೇಜೋವಧೆ ಮಾಡಿ ವರದಿ ಪ್ರಕಟಿಸಲಾಗಿದೆ ಎಂದು ದೂರು ದಾಖಲಿಸಿದ್ದರು. ಆದರೆ ಬೆಳಗೆರೆಯವರು ಇಲ್ಲ ಸಲ್ಲದ ಸಬೂಬು ಹೇಳಿ ಕೋರ್ಟ್ ವಿಚಾರಣೆಗೆ ಗೈರು ಹಾಜರಾಗಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ