Daily Horoscope

Select Your Language

Notifications

webdunia
webdunia
webdunia
webdunia

ಪ್ರತಾಪಸಿಂಹ ವಿರುದ್ಧ ಮತ್ತೊಂದು ಎಫ್‌ಐಆರ್‌: ಎಸ್‌ಸಿ ಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲು

Former MP Pratap Simha, Ganesha immersion procession, Karnataka Police
Photo Credit X
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ಟಿ. ನರಸೀಪುರದ ಡಾ. ಬಿ.ಆರ್. ಅಂಬೇಡ್ಕರ್ ವೆಲ್ಫೇರ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷರಾದ ಮಧು ಕೆ.ಟಿ. ಅವರು ನೀಡಿದ ದೂರಿನ ಮೇರೆಗೆ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಮೆರವಣಿಗೆಯ ವೇಳೆ ಪ್ರತಾಪ್ ಸಿಂಹ ಅವರು ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರನ್ನು ಉದ್ದೇಶಿಸಿ ಜಾತಿ ಹೆಸರನ್ನು ಬಳಸಿ ನಿಂದಿಸಿದ್ದಾರೆ ಹಾಗೂ ಸಾರ್ವಜನಿಕ ಶಾಂತಿಭಂಗ ಉಂಟುಮಾಡುವ ಮತ್ತು ದಲಿತ ಸಮುದಾಯವನ್ನು ಹೀಯಾಳಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮಾಜಿ ಸಂಸದರ ಮೇಲೆ ಜಾತಿ ನಿಂದನೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದು ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. 

ಟಿ. ನರಸೀಪುರದಲ್ಲಿ ಗಣೇಶ ಮೂರ್ತಿ ಮೆರವಣಿಗೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಸ್ಥಳೀಯ ಪೊಲೀಸರು ಹಾಗೂ ಹಿಂದೂಪರ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿತ್ತು. ಮಸೀದಿ ಮುಂಭಾಗ ಪಟಾಕಿ ಸಿಡಿಸುವುದಕ್ಕೆ ಸಂಬಂಧಿಸಿದಂತೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಈ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರತಾಪ್ ಸಿಂಹ ಅವರು ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಇದು ನಂತರ ದೊಡ್ಡ ವಿವಾದಕ್ಕೆ ತಿರುಗಿತ್ತು.

ಗೃಹ ಸಚಿವರ ಒತ್ತಡದ ಮೇರೆಗೆ ಪೊಲೀಸರು ಉದ್ದೇಶಪೂರ್ವಕವಾಗಿ ತಮ್ಮ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಪ್ರತಾಪಸಿಂಹ ಆರೋಪಿಸಿದ್ದಾರೆ.

ತಮ್ಮ ಮೇಲಿರುವ ಇಂತಹ ರಾಜಕೀಯ ಪ್ರೇರಿತ ಮತ್ತು ಹಿಂದುತ್ವ ಪರವಾದ ಹೋರಾಟದ ಪ್ರಕರಣಗಳನ್ನು ಕಾನೂನು ಮೂಲಕವೇ ಎದುರಿಸುವುದಾಗಿ ಮತ್ತು ನ್ಯಾಯಾಲಯದ ಮೊದಲು ಹೋಗುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ವಿದ್ಯಾರ್ಥಿ ಹಾಸ್ಟೆಲ್‌ಗಳ ಮೆನುವಿನಲ್ಲಿ ಗೋಮಾಂಸ: ವಿವಾದಕ್ಕೆ ಗ್ರಾಸವಾದ ತಮಿಳುನಾಡು ಸಚಿವರ ಹೇಳಿಕೆ